ಶುಕ್ರವಾರ, ಸೆಪ್ಟೆಂಬರ್ 6, 2024

ಕರ್ನಾಟಕ ವಿಧಾನಮಂಡಲದ ಎಸ್‌ಸಿ-ಎಸ್‌ಟಿ ಕಲ್ಯಾಣ ಸಮಿತಿಯಿಂದ ಬಳ್ಳಾರಿ ವಿಭಾಗ ಪ್ರವಾಸ

ಬಳ್ಳಾರಿ,ಸೆ.06(ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇAದ್ರಸ್ವಾಮಿ ಇವರ ನೇತೃತ್ವದ 19 ಜನ ಸದಸ್ಯರನ್ನೊಳಗೊಂಡ ಸಮಿತಿಯು ಇದೇ ಸೆಪ್ಟೆಂಬರ್ 19 ರಿಂದ 21 ರ ವರೆಗೆ ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಈ ಸಮಿತಿಯು ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಚರ್ಚೆ ನಡೆಸಲಿದೆ. ಸಮಿತಿಯು ಸೆಪ್ಟೆಂಬರ್ 21 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ/ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮರಳಿ ಕೇಂದ್ರಸ್ಥಾನಕ್ಕೆ ಪ್ರಯಾಣಿಸಲಿದೆ. ಪಿ.ಎಂ. ನರೇಂದ್ರಸ್ವಾಮಿ ನೇತೃತ್ವದ ಈ ಸಮಿತಿಯಲ್ಲಿ ವಿಧಾನಮಂಡಲದ ಸದಸ್ಯರುಗಳಾದ ಬಿ.ಜಿ. ಗೋವಿಂದಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಅಬ್ಬಯ್ಯ ಪ್ರಸಾದ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ., ಮಾನಪ್ಪ ಡಿ. ವಜ್ಜಲ, ಬಸನಗೌಡ ದದ್ದಲ, ಅನಿಲ್ ಚಿಕ್ಕಮಾದು, ಬಸವರಾಜ್ ಮತ್ತಿಮೂಡ್, ಎನ್. ಶ್ರೀನಿವಾಸಯ್ಯ, ಕೆ.ಸಿ. ವೀರೇಂದ್ರ ಪಪ್ಪಿ, ಪ್ರಕಾಶ ಕೋಳಿವಾಡ, ಕೃಷ್ಣ ನಾಯಕ, ಸಿಮೆಂಟ್ ಮಂಜು, ಕರೆಮ್ಮ, ಶಾಂತರಾಮ್ ಬುಡ್ನ ಸಿದ್ದಿ, ರಾಜೇಂದ್ರ ರಾಜಣ್ಣ, ವೈ.ಎಂ. ಸತೀಶ್ ಹಾಗೂ ಜಗದೇವ್ ಗುತ್ತೇದಾರ್ ಅವರು ಒಳಗೊಂಡಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ