ಸೋಮವಾರ, ಸೆಪ್ಟೆಂಬರ್ 2, 2024
ದೀಕ್ಷಾಭೂಮಿ ಯಾತ್ರೆಗೆ ತೆರಳಲು ಅರ್ಜಿ; ಅವಧಿ ವಿಸ್ತರಣೆ
ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಈಗಾಗಲೇ ಅರ್ಹ ಯಾತ್ರಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.05 ರ ವರೆಗೆ ವಿಸ್ತರಿಸಲಾಗಿದೆ.
ದೀಕ್ಷಾಭೂಮಿ ನಾಗಪುರಕ್ಕೆ ಹೋಗಬಯಸುವ ಯಾತ್ರಾರ್ಥಿಗಳು ಆನ್‌ಲೈನ್ ಮೂಲಕ ಇಲಾಖೆಯ ವೆಬ್‌ಸೈಟ್ hಣಣಠಿs://sತಿಜseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ/ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ