ಶುಕ್ರವಾರ, ಸೆಪ್ಟೆಂಬರ್ 6, 2024
ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆಗೊಳಿಸಿ: ಡಿಹೆಚ್‌ಒ ಡಾ.ವೈ.ರಮೇಶ್ ಬಾಬು
ಬಳ್ಳಾರಿ,ಸೆ.06(ಕರ್ನಾಟಕ ವಾರ್ತೆ):
ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರದ ನೀರು ಸಂಗ್ರಹಾರಕಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆಗೊಳಿಸಿ ಅನಾರೋಗ್ಯದಿಂದ ದೂರವಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗ, ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ಡೆಂಗ್ಯೂ ಹರಡುವ ಈಡೀಸ್ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಶುಕ್ರವಾರ ಬಂಡಿಮೋಟ್ ಪ್ರದೇಶದಲ್ಲಿನ ಮನೆಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.
ನೀರು ಸಂಗ್ರಹಿಸುವ ಡ್ರಮ್, ಬ್ಯಾರೆಲ್, ಕಲ್ಲಿನದೋಣಿ, ಸಿಮೆಂಟ್ ತೊಟ್ಟಿ ಮುಂತಾದವುಗಳಲ್ಲಿ ಕಂಡುಬರುವ ಬಾಲದ ಹುಳುವನ್ನು ನಿರ್ಲಕ್ಷö್ಯ ಮಾಡಬಾರದು. 7 ದಿನಗಳಲ್ಲಿ ಸೊಳ್ಳೆಯಾಗಿ ಡೆಂಗ್ಯೂ ರೋಗ ಹರಡುವ ಈಡೀಸ್ ಸೊಳ್ಳೆಯ ಮರಿಯಾಗುತ್ತವೆ ಎಂದರು.
ಸಾರ್ವಜನಿಕರು ತಮ್ಮ ಮನೆಗೆ ಬಳಕೆಗಾಗಿ ನೀರು ತುಂಬುವ ಎಲ್ಲಾ ಪರಿಕರಗಳನ್ನು ವಾರಕ್ಕೊಮ್ಮೆ ತೊಳೆದು, ಒಣಗಿಸಿ ನೀರು ತುಂಬಿದ ನಂತರ ಸರಿಯಾಗಿ ಮುಚ್ಚಳ ಮುಚ್ಚುವ ಮೂಲಕ ರೋಗ ನಿಯಂತ್ರಿಸಬೇಕು ಎಂದರು.
ಸೊಳ್ಳೆಗಳು ಕೇವಲ ಡೆಂಗ್ಯೂ ರೋಗ ಮಾತ್ರವಲ್ಲದೇ ಮಲೇರಿಯಾ, ಮೆದುಳು ಜ್ವರ, ಆನೆಕಾಲು ರೋಗ, ಡೆಂಗ್ಯೂ, ಚಿಕಿನ್ ಗುನ್ಯಾ ಮತ್ತು ಇತ್ತೀಚಿಗೆ ಕಂಡು ಬರುತ್ತಿರುವ ಝೀಕಾ ವೈರಸ್ ಸಹ ಹರಡಬಲ್ಲದು. ಈ ಕುರಿತಂತೆ ವ್ಯಾಪಕವಾಗಿ ಜಾಗೃತಿ ನೀಡಲಾಗುತ್ತಿದೆ.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್ ಅಬ್ದುಲ್ಲಾ ಅವರು ಮಾತನಾಡಿ, ಇತ್ತೀಚೆಗೆ ರಾಜ್ಯ ಸರ್ಕಾರವು ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ಕಾಯ್ದೆಗೆ ಒಳಪಡಿಸಿದ್ದು, ಈಡೀಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿ ತಾಣಗಳನ್ನು ನಿರ್ಲಕ್ಷö್ಯವಹಿಸಿದರೆ 200 ರೂ.ಗಳಿಂದ 2000 ರೂ.ಗಳ ವರೆಗೆ ದಂಡ ವಿಧಿಸುವ ಕಾನೂನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಸಾರ್ವಜನಿಕರು ಡೆಂಗ್ಯೂ ಕಾಯಿಲೆಗೆ ಕಂಡುಬರುವ ಲಕ್ಷಣಗಳಾದ ಜ್ವರ, ಕಣ್ಣು ಕೆಂಪಾಗುವಿಕೆ, ತಲೆನೋವು, ಗಂಧೆಗಳು, ಕೀಲುಗಳಲ್ಲಿ ನೋವು, ಸ್ನಾಯುಗಳಲ್ಲಿ ನೋವು ಕಂಡುಬAದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತಪ್ಪದೇ ಭೇಟಿ ನೀಡಿ ವೈದ್ಯರ ಸಲಹೆ ಮೇರೆಗೆ ಅಗತ್ಯ ಔಷದೋಪಚಾರವನ್ನು ಕೈಗೊಳ್ಳಬೇಖು ಎಂದರು.
ಹೆಚ್ಚು ದಿನಗಳ ಕಾಲ ನೀರು ಸಂಗ್ರಹವಿರುವ ಸ್ಥಳಗಳಲ್ಲಿ ಗಪ್ಪಿ ಮತ್ತು ಗಾಂಬೋಷಿಯ ಮೀನುಗಳನ್ನು ಬಿಡಲು ಅವಕಾಶವಿದ್ದು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮೀನುಗಳನ್ನು ಪಡೆದು ನೀರಿನ ತಾಣಗಳಲ್ಲಿ ಬಿಡಲು ಹಾಗೂ ಮನೆಯ ಮುಂದೆ ಸ್ವಚ್ಛಗೊಳಿಸಲಾಗದ ನೀರಿನ ಪರಿಕರಗಳಿಗೆ ಟೆಮಿಫಾಸ್ ದ್ರಾವಣವನ್ನು ತಮ್ಮ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಭೇಟಿ ನೀಡಿದಾಗ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೀಟಶಾಸ್ತçಜ್ಞೆ ನಂದಾ ಕಡಿ, ವೈದ್ಯಾಧಿಕಾರಿ ಡಾ.ಶಗುಪ್ತಾ ಶಾಹಿನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಸಿಬ್ಬಂದಿಗಳಾದ ನಿರಂಜನ್, ರ‍್ರಿಸ್ವಾಮಿ, ಉಮಾ ಮಹೇಶ್ವರಿ, ಅರುಣಾ, ಆರ್.ಕೆ ನರ್ಸಿಂಗ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)







ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ