ಗುರುವಾರ, ಸೆಪ್ಟೆಂಬರ್ 19, 2024
ಕಟ್ಟಡ ಕಾರ್ಮಿಕರಿಗೆ ವಿವಿಧ ಟೂಲ್‌ಕಿಟ್ ವಿತರಣೆ; ನೋಂದಣಿಗೆ ಆಹ್ವಾನ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಟೂಲ್‌ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹ ಕಟ್ಟಡ ಕಾರ್ಮಿಕರು ಆಯಾ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಾಯಿಸಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ.ಖೈನೂರು ಅವರು ತಿಳಿಸಿದ್ದಾರೆ.
ಈಗಾಗಲೇ ವಿವಿಧ ಟೂಲ್‌ಕಿಟ್ ಪಡೆದ ಕಾರ್ಮಿಕರನ್ನು ಹೊರತುಪಡಿಸಿ ಜೇಷ್ಠತೆ ಆಧಾರದಲ್ಲಿ ಮೇಸನ್ ಕಿಟ್, ವೆಲ್ಡಿಂಗ್ ಕಿಟ್, ರೋಡ್ ಕನ್ಸ್ಸ್ಟçಕ್ಷನ್ ಕಿಟ್ ಮತ್ತು ಎಲೆಕ್ಟಿçಷಿಯನ್ ಕಿಟ್ ಸೇರಿದಂತೆ ವಿವಿಧ ಟೂಲ್‌ಕಿಟ್‌ಗಳನ್ನು ವಿತರಿಸಲಾಗುವುದು.
ಅರ್ಹರು ತಮ್ಮ ಆಧಾರ್‌ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರ ಚಾಲ್ತಿಯಲ್ಲಿರುವ ಗುರುತಿನ ಚೀಟಿ ದಾಖಲೆಗಳನ್ನು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು.
ನೋAದಾಯಿಸಿಕೊಳ್ಳಲು ಸೆ.27 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿ ಹಾಗೂ ಕೌಲ್‌ಬಜಾರ್‌ನ ಮೊದಲನೇ ಗೇಟ್‌ನ ಮೊಹಮ್ಮದೀಯ ಕಾಲೇಜಿನ ಹಿಂಭಾಗದ ಬಳ್ಳಾರಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ