ಬುಧವಾರ, ಸೆಪ್ಟೆಂಬರ್ 18, 2024

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಬಳ್ಳಾರಿ,ಸೆ.18(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ತಿಳಿಸಿದ್ದಾರೆ. *ಜಿಲ್ಲಾ ಮಟ್ಟ:* ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.26 ರಂದು ಜಿಲ್ಲಾ ಕ್ರೀಡಾಂಗಣ ಮತ್ತು ಬಿಡಿಎಎ ಫುಟ್‌ಬಾಲ್ ಮೈದಾನದಲ್ಲಿ ಆಯೋಜಿಸಲಾಗಿದೆ. *ತಾಲ್ಲೂಕು ಮಟ್ಟ:* ಕಂಪ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸೆ.20 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ. ಕುರುಗೋಡಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸೆ.21 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಿರುಗುಪ್ಪದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ. ಸಂಡೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಸೆ.24 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.25 ರಂದು ಬೆಳಿಗ್ಗೆ 10.30 ಗಂಟೆಗೆ ಏರ್ಪಡಿಸಲಾಗಿದೆ. *ನಿರ್ದೇಶನಗಳು:* ಕ್ರೀಡಾಕೂಟದಲ್ಲಿ ಆಯಾ ತಾಲ್ಲೂಕಿನ ಪುರಷ ಮತ್ತು ಮಹಿಳಾ ಕ್ರೀಡಾಪಟುಗಳು ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್(ಪುರಷರಿಗೆ ಮಾತ್ರ), ಥ್ರೋಬಾಲ್, ಯೋಗ ಕ್ರೀಡೆಗಳಲ್ಲಿ ಭಾಗವಹಿಸಬಹುದು. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ, ಆಕ್ಷೇಪಣೆಯಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ನಿಯಮಾನುಸಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಆಯಾ ತಾಲ್ಲೂಕಿನಲ್ಲಿ ವಾಸಿಸುವ ಕ್ರೀಡಾಪಟುಗಳಿಗೆ ಮಾತ್ರ ಭಾಗವಹಿಸಲು ಅರ್ಹರಿದ್ದು, ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸುವಂತಿಲ್ಲ. ಸೆ.26 ರಂದು ಜಿಲ್ಲಾ ಕ್ರೀಡಾಂಗಣ ಮತ್ತು ಬಿಡಿಎಎ ಫುಟ್ಬಾಲ್ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಾತ್ರ ಪ್ರಯಾಣ ಭತ್ಯೆಯನ್ನು ಕೆ2 ಮೂಲಕ ಜಮೆ ಮಾಡಲಾಗುವುದು(ಬ್ಯಾಂಕ್ ವಿವರ ಕಡ್ಡಾಯವಾಗಿ ಒದಗಿಸಬೇಕು). ಹೆಚ್ಚಿನ ವಿವರಗಳಿಗಾಗಿ ಹಾಕಿ ತರಬೇತುದಾರ ಎಂ.ಜಾಕೀರ್ ಮೊ: 9036335986, ಅಥ್ಲೆಟಿಕ್ ತರಬೇತುದಾರೆ ರೋಹಿಣಿ ರ‍್ವತ್‌ಕರ್, ಮೊ: 8217324522, ಬ್ಯಾಡ್ಮಿಂಟನ್ ತರಬೇತುದಾರ ಜಿ.ರವಿ ಮೊ:9739852460, ಫುಟ್ಬಾಲ್ ತರಬೇತುದಾರರು ಮಹ್ಮದ್ ಮಸೂದ್ ಮೊ:9886688858, ಬಾಸ್ಕೆಟ್ ಬಾಲ್ ತರಬೇತುದಾರ ನಿಸಾರ್ ಅಹ್ಮದ್ ಮೊ:8088380909 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ