ಗುರುವಾರ, ಸೆಪ್ಟೆಂಬರ್ 26, 2024
ಗುರುತಿನ ಚೀಟಿ ವಿತರಣೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಜಿಲ್ಲೆಯ ವಲಸೆಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಠ 20 ಕುರಿಗಳನ್ನು ಹೊಂದಿರಬೇಕು. ನಿಗಧಿಪಡಿಸಿದ ಅರ್ಜಿ ನಮೂನೆಗಳನ್ನು ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಾಖಲೆಗಳೊಂದಿಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಪಶು ಆಸ್ಪತ್ರೆ ಆವರಣದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08394-225129 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ