ಮಂಗಳವಾರ, ಸೆಪ್ಟೆಂಬರ್ 3, 2024
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ಗೆ ಉಳಿಕೆಯಾಗಿರುವ ಕೋರ್ಸ್ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಎಐಸಿಟಿಇ ನಿಯಮಗಳನ್ವಯ ಕನಿಷ್ಠ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸೆ.06 ರೊಳಗಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬೇಕು.
*ಖಾಲಿಯಿರುವ ಹುದ್ದೆಗಳ ಸಂಖ್ಯೆ:*
ಆಟೋ ಮೊಬೈಲ್ ವಿಭಾಗ-06, ಸಿವಿಲ್ ವಿಭಾಗ-01, ಎಲೆಕ್ಟಿçಕಲ್ ವಿಭಾಗ-02, ಮೆಟಲರ್ಜಿ-06, ವಿಜ್ಞಾನ-02, ಇಂಗ್ಲೀಷ್-01 ಮತ್ತು ಕನ್ನಡ-01 ಸೇರಿ ಒಟ್ಟು 19 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ