ಶುಕ್ರವಾರ, ಸೆಪ್ಟೆಂಬರ್ 13, 2024

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಸೆ.13(ಕರ್ನಾಟಕ ವಾರ್ತೆ): ಸಿರುಗುಪ್ಪ ತಾಲ್ಲೂಕಿನ ಬಂಡ್ರಾಳ್ ಗ್ರಾಮದ ಕೆ.ಮಂಜುನಾಥಗೌಡ ಎನ್ನುವ 40 ವರ್ಷದ ವ್ಯಕ್ತಿಯು ಆ.24 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಅರಕ್ಷಕ ಉಪನಿರೀಕ್ಷಕರು ತಿಳಿಸಿದ್ದಾರೆ. ಚಹರೆ: 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲುಮುಖ, ಕೆಂಪನೇü ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ, ಕಲರ್ ಲುಂಗಿ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ವೃತ್ತ ಸಿಪಿಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿಎಸ್‌ಪಿ ದೂ.08392-276000 ಮತ್ತು ಬಳ್ಳಾರಿ ಕಂಟ್ರೋಲ್ ರೂಂ ದೂ.08392-258102 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ