ಸೋಮವಾರ, ಸೆಪ್ಟೆಂಬರ್ 23, 2024
ಮೀನುಗಾರಿಕೆ ಇಲಾಖೆ; ಅರ್ಜಿ ಆಹ್ವಾನ
ಬಳ್ಳಾರಿ,ಸೆ.23(ಕರ್ನಾಟಕ ವಾರ್ತೆ):
ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ರಾಜ್ಯದ ವಿವಿಧ ಜಲಾಶಯಗಳಿಗೆ 80-100 ಗಾತ್ರದ ಬಲಿತ ಬಿತ್ತನೆ ಮೀನು ಮರಿಗಳನ್ನು ಸರಬರಾಜು ಮಾಡಲು ಮೀನುಗಾರಿಕೆ ಇಲಾಖೆಯಲ್ಲಿ ನೋಂದಾಯಿಸಿರುವ ಆಸಕ್ತ ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರು ತಿಳಿಸಿದ್ದಾರೆ.
ಸರ್ಕಾರ ನಿಗದಿಪಡಿಸಿರುವ ದರಗಳಲ್ಲಿ (ಸಾಗಣಿಕೆ ವೆಚ್ಚ ಸೇರಿ) ಅನುದಾನ ಲಭ್ಯತೆಗನುಗುಣವಾಗಿ ಒದಗಿಸಬೇಕು. ಅರ್ಜಿಗಳನ್ನು ಸೆ.26 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಲಯ, ಜಿಲ್ಲಾ, ತಾಲ್ಲೂಕು ಮೀನುಗಾರಿಕೆ ಇಲಾಖೆಯ ಕಚೇರಿ ಅಥವಾ ವೆಬ್‌ಸೈಟ್ www.fisheries.karnataka.gov.in ಲಿಂಕ್‌ಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ