ಮಂಗಳವಾರ, ಸೆಪ್ಟೆಂಬರ್ 3, 2024
ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅಲ್ಪಸಂಖ್ಯಾತರ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನದಲ್ಲಿ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ.
ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ) ಅಭ್ಯರ್ಥಿಗಳಿಂದ ಸೇವಾಸಿಂಧು ವೆಬ್ ಪೊರ್ಟಲ್ hಣಣಠಿs://sevಚಿsiಟಿಜu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಸೆ.10 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ ತಿತಿತಿ.ಜom.ಞeಡಿಟಿಚಿಣಚಿಞಚಿ.gov.iಟಿ ರಲ್ಲಿ “2024-25 ಸಾಲಿನ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ” ಇಲ್ಲಿ ಕ್ಲಿಕ್ ಮಾಡುವುದರ ಮೂಲಕ ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ