ಸೋಮವಾರ, ಸೆಪ್ಟೆಂಬರ್ 2, 2024
ರಾಜ್ಯ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ):
ರಾಜ್ಯ ಸರ್ಕಾರದ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮಕ್ಕಳ ದಿನಾಚಾರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಕರಣವು 01ನೇ ಆಗಸ್ಟ್ 2023 ರಿಂದ 31ನೇ ಜುಲೈ 2024 ರೊಳಗೆೆ ನಡೆದಿರಬೇಕು ಮತ್ತು ದಿ:01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳ ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದವರಿಗೆÉ ತಲಾ ರೂ.10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ.
ಮಕ್ಕಳ ದಿನಾಚರಣೆ-2024 ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ಸೆ.21 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಎಸ್‌ಸಿ ವೃತ್ತದ ಬಳಿಯ ದೇವಿನಗರದ ಸ್ತಿçÃಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-266219 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ