ಶನಿವಾರ, ಸೆಪ್ಟೆಂಬರ್ 21, 2024

ಕರ್ನಾಟಕ ಸಾಹಿತ್ಯ ಅಕಾಡೆಮಿ; ಅರ್ಜಿ ಆಹ್ವಾನ

ಬಳ್ಳಾರಿ,ಸೆ.21(ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಹಾವೇರಿ ಜಿಲ್ಲೆಯ ಗೋಟಗೋಡಿಯಲ್ಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಅಕ್ಟೋಬರ್ ಕೊನೆಯ ವಾರದಲ್ಲಿ 3 ದಿನಗಳ ಕಮ್ಮಟ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ‘ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು’ ಎಂಬ ಹೆಸರಿನಡಿ ಹಾವೇರಿ ಜಿಲ್ಲೆಯ ಗೋಟಗೋಡಿಯಲ್ಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಜಿದಾರರು 20 ರಿಂದ 45 ವಯೋಮಿತಿ ಹೊಂದಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅ.08 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‌ಸೈಟ್ http://karnatakasahithyaacademy.org ಲಿಂಕ್ ಗೆ ಭೇಟಿ ನೀಡಿ ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ