ಸೋಮವಾರ, ಸೆಪ್ಟೆಂಬರ್ 2, 2024
ಸಮಾಜ ಕಲ್ಯಾಣ ಇಲಾಖೆ; ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಶೈಕ್ಷಣಿಕ ಅವಧಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮತ್ತು ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಗೆ ಭೇಟಿ ನೀಡಬಹುದು ಅಥವಾ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ