ಶುಕ್ರವಾರ, ಸೆಪ್ಟೆಂಬರ್ 6, 2024

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮ

ಬಳ್ಳಾರಿ,ಸೆ.06(ಕರ್ನಾಟಕ ವಾರ್ತೆ): ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು ಅವರು ತಿಳಿಸಿದ್ದಾರೆ. ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಆರ್.ವಸಂತ್‌ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ರಫಿ, ಸಂಗಮೇಶ್ ನೇತೃತ್ವದಲ್ಲಿ ಕಂಪ್ಲಿ, ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. *ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:* ಸೆ.11 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಸಿರುಗುಪ್ಪದ ಸಿಡಿಪಿಓ ಕಚೇರಿ ಸಭಾಂಗಣ. ಸೆ.18 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡಿನ ತಹಶೀಲ್ದಾರರ ಕಚೇರಿ ಸಭಾಂಗಣ ಮತ್ತು ಸೆ.21 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಸಂಡೂರಿನ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ದೂರುಗಳಿದ್ದಲ್ಲಿ ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ