ಗುರುವಾರ, ಸೆಪ್ಟೆಂಬರ್ 12, 2024

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ; ಪೋಸ್ಟರ್ ಅಳವಡಿಕೆ

ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ): ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ನೀಡಲು ಬಸ್‌ಗಳು ಮತ್ತು ಮೈನಿಂಗ್ ವಾಹನಗಳು ಹಾಗೂ ಇನ್ನಿತರೆ ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಗಳ ವಾಹನಗಳಿಗೆ 1000 ಪೋಸ್ಟರ್‌ಗಳನ್ನು ಅಳವಡಿಸುವ ಕಾರ್ಯಕ್ಕೆ ಪದ್ಮಶ್ರೀ ಪುರಸ್ಕೃತೆ ಡಾ.ಮಾತಾ ಬಿ.ಮಂಜಮ್ಮ ಜೋಗತಿ ಅವರು ಇಂದು ವಾಲ್ಮೀಕಿ ಭವನದ ಆವರಣದಲ್ಲಿ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಎಎಸ್ಪಿ ನವೀನ್‌ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ದಿವಾಕರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಇದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ