ಬುಧವಾರ, ಸೆಪ್ಟೆಂಬರ್ 11, 2024
ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.11(ಕರ್ನಾಟಕ ವಾರ್ತೆ):
ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸö್ಯಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ಮೀನುಮರಿ ಪಾಲನೆ ಕೊಳಗಳು), ಲವಣ/ಕ್ಷಾರಿಯ ಪ್ರದೇಶಗಳಿಗೆ ಹೊಸ ಕೊಳಗಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚ ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಐಸ್ ಬಾಕ್ಸ್ನೊಂದಿಗೆ ಮೋಟಾರ್ ಸೈಕಲ್ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ಹೊಂದಿರುವ ತ್ರಿಚಕ್ರ ಹಾಗೂ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತಿ ಹೊಂದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40 ರಂತೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸಂಬAಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ- ಮೊ.9449593156, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ-ಮೊ.7406508971 ಮತ್ತು ಸಂಡೂರು ಮೊ.7204911897 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ