ಗುರುವಾರ, ಅಕ್ಟೋಬರ್ 31, 2024

ಸಂಡೂರು ವಿಧಾನಸಭೆ ಉಪಚುನಾವಣೆ: ಸ್ಪರ್ಧೆಯಲ್ಲಿನ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಮಾನ್ಯತೆ ಪಡೆದ ರಾಷ್ಟಿçÃಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರಿಗೆ ಕೈ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ. ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ.ಎನ್ ಅವರಿಗೆ ವಜ್ರ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರಿಗೆ ಬ್ಯಾಟರಿ ಚಾರ್ಜ್, ಟಿ.ರ‍್ರಿಸ್ವಾಮಿ ಅವರಿಗೆ ಟ್ರಕ್, ಎನ್.ವೆಂಕಣ್ಣ ಅವರಿಗೆ ಉಂಗುರ ಚಿಹ್ನೆ ನೀಡಲಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ----------

ಕರ್ನಾಟಕ ಸಂಭ್ರಮ-50 ಅಭಿಯಾನದ ಸುವರ್ಣ ಮಹೋತ್ಸವ ಪ್ರಶಸ್ತಿ-2024: ಬಳ್ಳಾರಿ ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಕರ್ನಾಟಕ ಸಂಭ್ರಮ-50 ಅಭಿಯಾನದ ಸುರ್ವಣ ಮಹೋತ್ಸವ ಸಂಧರ್ಭಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 50 ಜನ ಮಹಿಳಾ ಸಾಧಕರು ಮತ್ತು 50 ಜನ ಪುರುಷ ಸಾಧಕರಿಗೆ 2024ನೇ ಸಾಲಿನಲ್ಲಿ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿದ ಗೌರವಿಸಲು ಸರ್ಕಾರವು ಸಾಧಕರನ್ನು ಆಯ್ಕೆ ಮಾಡಿ ಘೋಷಿಸಿದೆ. ಕರ್ನಾಟಕ ಸಂಭ್ರಮ-50 ಸುರ್ವಣ ಮಹೋತ್ಸವ ಪ್ರಶಸ್ತಿ-2024ಗೆ ಬಳ್ಳಾರಿ ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ. ಪುರಷ ವಿಭಾಗದ ಶಿಕ್ಷಣ ಕ್ಷೇತ್ರದಲ್ಲಿ ಟಿ.ಎಂ.ಚAದ್ರಶೇಖರಯ್ಯ ಮತ್ತು ಮಹಿಳಾ ವಿಭಾಗದ ಬಯಲಾಟ/ಯಕ್ಷಗಾನ ಕ್ಷೇತ್ರದಲ್ಲಿ ಹುಲಿಗೆಮ್ಮ ಅವರು ಆಯ್ಕೆಯಾಗಿದ್ದು, ಜಿಲ್ಲಾಡಳಿತವು ಅಭಿನಂದಿಸಿದೆ. ----------

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ಇಬ್ಬರು ಆಯ್ಕೆ; ಜಿಲ್ಲಾಡಳಿತದಿಂದ ಅಭಿನಂದನೆ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ನ.01 ರಂದು ಆಚರಿಸುತ್ತಿರುವ 69ನೇ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ಅಶ್ವ ರಾಮಣ್ಣ ಮತ್ತು ವಿರೂಪಾಕ್ಷಪ್ಪ ನೇಕಾರ ಅವರು ಆಯ್ಕೆಯಾಗಿದ್ದಾರೆ. ಅಶ್ವ ರಾಮಣ್ಣ ಅವರು ಜಾನಪದ ಕ್ಷೇತ್ರದಲ್ಲಿ ಮತ್ತು ವಿರೂಪಾಕ್ಷಪ್ಪ ನೇಕಾರ ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಜಿಲ್ಲಾಡಳಿತವು ಅಭಿನಂದಿಸಿದೆ. -----------

ಮೀನುಗಾರಿಕೆ ಇಲಾಖೆ: ಮತ್ಸö್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸö್ಯವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸö್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ. ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸö್ಯವಾಹಿನಿ ವಾಹನಗಳನ್ನು ನೀಡಲಾಗುತ್ತದೆ. ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು. ಅರ್ಜಿ ಸಲ್ಲಿಸಲು ನ.11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8722574158, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.7204911897, ಬಳ್ಳಾರಿ ಮೀನುಗಾರಿಕೆ ಉಪ ನಿರ್ದೇಶಕರ ಮೊ.9449593156 ಗೆ ಸಂರ್ಪಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಕರಸಾ ನಿಗಮ: ನ.04 ರಂದು ‘ಫೋನ್ ಇನ್ ಕಾರ್ಯಕ್ರಮ’

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಕುಂದು ಕೊರತೆಗಳನ್ನು ಆಲಿಸಲು ನ.04 ರಂದು ಮಧ್ಯಾಹ್ನ 3.30 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ “ಪೋನ್ ಇನ್ ಕಾರ್ಯಕ್ರಮ” ಏರ್ಪಡಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ. ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದುಕೊರತೆ, ಸಮಸ್ಯೆಗಳಿದ್ದಲ್ಲಿ ಮೊ.7760992152, 6366423885 ಗೆ ಕರೆ ಮಾಡಿ ತಿಳಿಸಬಹುದು. ಬಳ್ಳಾರಿ ವಿಭಾಗದ ವ್ಯಾಪ್ತಿಯಲ್ಲಿ ಪ್ರತಿ ತಿಂಗಳ ಒಂದನೇ ಸೋಮವಾರದಂದು ಬಳ್ಳಾರಿ, ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳಿಗೆ ಸಂಬAಧಿಸಿದAತೆ ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು-ಕೊರತೆಗಳನ್ನು ಆಲಿಸಲು ‘ಪೋನ್ ಇನ್ ಕಾರ್ಯಕ್ರಮ’ ಆಯೋಜಿಸಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು ಕೊರತೆಗಳಿದ್ದಲ್ಲಿ ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಪ್ರಯಾಣಿಕರು “ಪೋನ್ ಇನ್ ಕಾರ್ಯಕ್ರಮ”ವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಸಂಡೂರು ವಿಧಾನಸಭೆ ಉಪಚುನಾವಣೆ: ಅಂತಿಮ ಕಣದಲ್ಲಿ 06 ಅಭ್ಯರ್ಥಿಗಳು

ಬಳ್ಳಾರಿ,ಅ.30ಕರ್ನಾಟಕ ವಾರ್ತೆ): 95-ಸಂಡೂರು (ಪ.ಪಂ) ವಿಧಾನಸಭಾ ಉಪಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಹಿಂಪಡೆಯುವ ದಿನವಾದ ಬುಧವಾರದಂದು, ಓರ್ವ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ಅಂತಿಮ ಕಣದಲ್ಲಿ 06 ಅಭ್ಯರ್ಥಿಗಳು ಇದ್ದಾರೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಅ.18 ರಿಂದ 25 ರವರೆಗೆ ನಾಮಪತ್ರ ಸಲ್ಲಿಕೆಯ ಅವಧಿಯಲ್ಲಿ ಒಟ್ಟು 07 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅ.28 ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 07 ಅಭ್ಯರ್ಥಿಗಳ ನಾಮಪತ್ರಗಳು ಕ್ರಮವಾಗಿದ್ದವು. ನಾಮಪತ್ರ ವಾಪಸ್ಸು ಪಡೆಯುವ ದಿನವಾದ ಅ.30 (ಬುಧವಾರ) ರಂದು ಸ್ವತಂತ್ರ ಅಭ್ಯರ್ಥಿ ಬಂಗಾರಿ ಅನಿಲ್ ಕುಮಾರ್ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅಂತಿಮ ಕಣದಲ್ಲಿ 06 ಅಭ್ಯರ್ಥಿಗಳು: ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ, ಅದೇರೀತಿಯಾಗಿ ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ) ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ.ಎನ್ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ, ಟಿ.ಎರ‍್ರಿಸ್ವಾಮಿ, ಎನ್.ವೆಂಕಣ್ಣ ಅಂತಿಮ ಕಣದಲ್ಲಿ ಇದ್ದಾರೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. =========

ಬುಧವಾರ, ಅಕ್ಟೋಬರ್ 30, 2024

ಪಿಂಚಣಿದಾರರ ಮನೆಬಾಗಿಲಿಗೆ ಜೀವನ್ ಪ್ರಮಾಣ ಪತ್ರ; ನ.04 ರಿಂದ ವಿಶೇಷ ಶಿಬಿರ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್, ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ ಮತ್ತು ರಾಷ್ಟಿçÃಯ ಮಾಹಿತಿ ಕೇಂದ್ರ ಸಮನ್ವಯದೊಂದಿಗೆ ಎಲ್ಲಾ ಕೇಂದ್ರ, ರಾಜ್ಯ ಮತ್ತು ಉದ್ಯೋಗಿಗಳ ಭವಿಷ್ಯನಿಧಿಯ ಸಂಸ್ಥೆ ಪಿಂಚಣಿದಾರರಿಗೆ ಜೀವನ್ ಪ್ರಮಾಣ ಪತ್ರವನ್ನು ನೀಡಲು ಸುಲಭವಾಗುವಂತೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೇವೆ ಪರಿಚಯಿಸಿದೆ. ಅಂಚೆಪೇದೆ ಮತ್ತು ಗ್ರಾಮೀಣ ಅಂಚೆ ಸೇವಕರಿಂದ ಪಿಂಚಣಿದಾರರಿಗೆ ಅನುಕೂಲಕ್ಕಾಗಿ ಅವರ ಮನೆಬಾಗಿಲಲ್ಲಿಯೇ ಆಧಾರ್ ಮತ್ತು ಪಿಂಚಣಿ ವಿವರಗಳನ್ನು ಬಳಸಿಕೊಂಡು ಡಿಜಿಟಲ್ ಜೀವನ್ ಪ್ರಮಾಣ ವಿತರಿಸುವ ವಿಶೇಷ ಅಭಿಯಾನವನ್ನು ನವೆಂಬರ್ 1 ರಿಂದ ನವೆಂಬರ್ 30 ವರೆಗೆ ಹಮ್ಮಿಕೊಂಡಿದ್ದು, ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಅಥವಾ ತಮ್ಮ ಭಾಗದ ಅಂಚೆ ಬಟವಾಡೆಗೆ ಬರುವ ಅಂಚೆ ಸಿಬ್ಬಂದಿಯನ್ನು ಸಂಪರ್ಕಿಸಿ ಮನೆಯಲ್ಲಿಯೇ ಕುಳಿತು ಬೆರಳಚ್ಚು ಅಥವಾ ಮುಖಚಹರೆಯನ್ನು ನೀಡಿ ತಮ್ಮ ಜೀವನ ಪ್ರಮಾಣ ಪತ್ರ ಪಡೆಯಬಹುದು. ಈ ಅಭಿಯಾನದ ಭಾಗವಾಗಿ ಬಳ್ಳಾರಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ವಿಶೇಷ ಡಿಎಲ್‌ಸಿ ನೋಂದಣಿ ಶಿಬಿರ ಹಮ್ಮಿಕೊಳ್ಳಲಾಗಿದೆ. ನ.04 ರಂದು ಬಳ್ಳಾರಿ ಪ್ರಧಾನ ಅಂಚೆ ಕಚೇರಿ, ನ.08 ರಂದು ಹೊಸಪೇಟೆ ಪ್ರಧಾನ ಅಂಚೆಕಚೇರಿ, ನ.16 ರಂದು ಕೂಡ್ಲಿಗಿ ಅಂಚೆ ಕಚೇರಿ, ನ.25 ರಂದು ಸಿರುಗುಪ್ಪ ಅಂಚೆ ಕಚೇರಿ, ನ.23 ರಂದು ಹರಪನಹಳ್ಳಿ ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಶಿಬಿರಗಳನ್ನು ಏರ್ಪಡಿಸಲಾಗಿದ್ದು, ಎಲ್ಲಾ ಪಿಂಚಣಿದಾರರು ಈ ಸೇವೆಯ ಸದುಪಯೋಗ ಪಡೆಯಬೇಕು. ಈ ಸೇವೆಗಾಗಿ ಪಿಂಚಣಿದಾರರು ರೂ.70 ಶುಲ್ಕ ಪಾವತಿಸಿ ತಮ್ಮ ಆಧಾರ್ ಪ್ರತಿ ಮತ್ತು ಪಿಂಚಣಿ ಬಗೆಗಿನ ವಿವರ ನೀಡಬೇಕು. ಈ ಡಿಎಲ್‌ಸಿ ಪ್ರಕ್ರಿಯೆಯು, ಪಿಂಚಣಿದಾರರಿಗೆ ಸಾಂಪ್ರದಾಯಿಕ ಕಾಗದ ಆಧಾರಿತ ಪ್ರಮಾಣಪತ್ರಗಳನ್ನು ಸಲ್ಲಿಸುವ ಅಗತ್ಯವನ್ನು ನಿವಾರಿಸುತ್ತದೆ ಮತ್ತು ಜೀವನ ಪ್ರಮಾಣಪತ್ರ ಸಲ್ಲಿಕೆಗೆ ಸುಲಭವಾದ ಪ್ರಕ್ರಿಯೆ ಒದಗಿಸುತ್ತದೆ. ಈ ಪ್ರಮಾಣ ಪತ್ರ ವಿತರಿಸುವ ಪ್ರಕ್ರಿಯೆಯು ಪೂರ್ಣಗೊಂಡ ನಂತರ ಪಿಂಚಣಿದಾರರು ತಮ್ಮ ಮೊಬೈಲ್‌ನಲ್ಲಿ ದೃಢೀಕರಣ ಸಂದೇಶ ಪಡೆಯುತ್ತಾರೆ ಹಾಗೂ ಎರಡು ದಿನಗಳ ನಂತರ ಜೀವನ್ ಪ್ರಮಾಣ ಪತ್ರವನ್ನು https://jeevanpramaan.gov.in/ppouser/login ವೆಬ್‌ಸೈಟ್‌ನ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಅಂಗವಾಗಿ ವಿಶೇಷ ಅಭಿಯಾನ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ಅರ್ಹತಾ 2025ರ ಜ.01ರ ಸಂಬAಧ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿ ದಿನಾಂಕ ಹೊರಡಿಸಿದ್ದು, ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು ಹಾಗೂ ಇನ್ನೂ ಹೆಚ್ಚು ಮತದಾರರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಈಗಾಗಲೇ, ಅ.29 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದೆ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.28 ರವರೆಗೆ ಅವಧಿ ನಿಗದಿಪಡಿಸಿದೆ ಮತ್ತು 2025 ರ ಜ.06 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದೆ. *ವಿಶೇಷ ಅಭಿಯಾನ:* ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಸಂಬAಧ ನವೆಂಬರ್ 09, 10 ಮತ್ತು 23, 24 ರಂದು ವಿಶೇಷ ಅಭಿಯಾನ ಕಾರ್ಯವನ್ನು ಹಮ್ಮಿಕೊಂಡಿದ್ದು, ಮೇಲಿನ ವೇಳಾಪಟ್ಟಿಯಂತೆ ಹಾಗೂ ವಿಶೇಷ ಅಭಿಯಾನಕ್ಕೆ ನಿಗದಿಪಡಿಸಿದ ದಿನಾಂಕಗಳAದು ಆಯಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಹಾಜರಿರುತ್ತಾರೆ. ಅರ್ಹತಾ ದಿನಾಂಕ 2025 ರ ಜ.01 ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲಾ ಅರ್ಹ ಮತದಾರರು ನಮೂನೆ-6 ಅರ್ಜಿಯನ್ನು ನಿಗದಿಪಡಿಸಿದ ದಿನಗಳಂದು ಸಂಬAಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅಥವಾ ತಾಲ್ಲೂಕು ಕಚೇರಿಯಲ್ಲಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿ ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮತದಾರರ ಮನೆಯ ಸಂಬAಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ. ಅರ್ಹ ಮತದಾರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊAಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮನವಿ ಮಾಡಿದ್ದಾರೆ. --------

ಮಕ್ಕಳ ಬೆಳವಣಿಗೆಯಲ್ಲಿ ನ್ಯೂನ್ಯತೆಗಳು ಕಂಡುಬAದಲ್ಲಿ ಮೇಲ್ಮಟ್ಟದ ಆಸ್ಪತ್ರೆಗಳ ಶಿಫಾರಸ್ಸಿಗೆ ಕ್ರಮವಹಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಶಾಲೆ-ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಬೆಳವಣಿಗೆಯಲ್ಲಿ ನ್ಯೂನ್ಯತೆಗಳು ಕಂಡುಬAದಲ್ಲಿ ತಕ್ಷಣವೇ ಗುರ್ತಿಸಿ ಚಿಕಿತ್ಸೆಗೆ ಮೇಲ್ಮಟ್ಟದ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು. ಬುಧವಾರದಂದು ಜಿಲ್ಲಾ ಪಂಚಾಯತ್‌ನ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮದಡಿ ಮಕ್ಕಳ ಬಾಲ್ಯದ ಬೆಳವಣಿಗೆಯ ನ್ಯೂನತೆಗಳನ್ನು ಆರ್‌ಬಿಎಸ್‌ಕೆ ವೈದ್ಯರ ತಂಡದ ಶಾಲೆ ಮತ್ತು ಅಂಗನವಾಡಿಗಳಲ್ಲಿ ಗುರ್ತಿಸಿ ಪಾಲಕರಿಗೆ ಸರಿಯಾದ ಮಾಹಿತಿ ನೀಡಬೇಕು. ಬಳಿಕ ಜಿಲ್ಲಾ ಡಿಇಐಸಿ ಕೇಂದ್ರಕ್ಕೆ ಕಳುಹಿಸಿಕೊಡಲು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲ ಆರ್‌ಬಿಎಸ್‌ಕೆ ತಂಡಗಳು ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ನಿಗದಿತ ಸಮಯದೊಳಗೆ ಎಲ್ಲ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದರು. ಯಾವುದೇ ಮಗುವಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ತಕ್ಷಣವೇ ಚಿಕಿತ್ಸೆಗೆ ಕಳುಹಿಸುವ ವ್ಯವಸ್ಥೆ ಸಂಬAಧಿಸಿದ ಆರ್‌ಬಿಎಸ್‌ಕೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಮಾಡುವ ಮೂಲಕ ಮಗುವಿನ ಭವಿಷ್ಯ ಉಜ್ವಲವಾಗಲು ಶ್ರಮಿಸಬೇಕು ಎಂದು ಸೂಚಿಸಿದರು. ಮಗುವಿನ ಜನನದ ನಂತರ ಗುರ್ತಿಸುವ ಬೆಳವಣಿಗೆಯ ನ್ಯೂನ್ಯತೆಗಳಾದ ದೃಷ್ಟಿದೋಷ, ಕಿವಿ ಕೆಳದಿರುವುದು, ಮಾತು ಬಾರದಿರುವುದು, ಸಿಳುತುಟಿ ಸಿಳುಅಂಗಳ, ಮತ್ತು ಹೃದಯದ ಸಮಸ್ಯೆಗಳು, ದೈಹಿಕ ಊನತೆಗಳನ್ನು ಹಾಗೂ ಇತರೆ ಯಾವುದೆ ಗಂಭೀರ ಸಮಸ್ಯೆಗಳನ್ನು ಕಂಡುಬAದಲ್ಲಿ ಗುರ್ತಿಸಿ ಚಿಕಿತ್ಸೆ ನೀಡಬೇಕು ಎಂದರು. ಗರ್ಭಿಣಿಯೆAದು ತಿಳಿದ ತಕ್ಷಣವೇ ದಾಖಲಿಸಿಕೊಂಡು ತಾಯಿಕಾರ್ಡ್ ವಿತರಿಸಬೇಕು. ಅವರ ಕಾಳಜಿ ಹಾಗೂ ನಿಗಾವಹಿಸಿ ಗರ್ಭಪಾತದ ಸಾಧ್ಯತೆಗಳನ್ನು ಪತ್ತೆ ಹಚ್ಚಿ ಹೆಣ್ಣು ಭ್ರೂಣಹತ್ಯೆಯಾಗದಂತೆ ನಿಗಾವಹಿಸಬೇಕು ಎಂದು ತಿಳಿಸಿದರು. ಹೆಣ್ಣು ಮಗು ಜನನವವಾದ ಕುಟುಂಬಕ್ಕೆ ಗೌರವ ಅರ್ಪಿಸುವ ಜೊತೆಗೆ ಉಡುಗೊರೆಯ ರೂಪದಲ್ಲಿ ಕಿಟ್‌ನ್ನು ಗ್ರಾಮ ಪಂಚಾಯತ್ ಮೂಲಕ ಒದಗಿಸಲು ಅಗತ್ಯ ಕ್ರಮವಹಿಸಲು ಸೂಚಿಸಿದರಲ್ಲದೇ, ಗರ್ಭಿಣಿಯರ ಕನಿಷ್ಟ ನಾಲ್ಕು ತಪಾಸಣೆಗಳು ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಅಗತ್ಯ ಇರುವವರಿಗೆ ಹೆಚ್ಚುವರಿ ಸ್ಕಾö್ಯನಿಂಗ್ ಕೈಗೊಳ್ಳಲು ತಿಳಿಸಬೇಕು. ಮನೆ ಹೆರಿಗೆಗೆ ಆದ್ಯತೆ ನೀಡದೇ ಆಸ್ಪತ್ರೆಗೆ ಕಳುಹಿಸಲು 108 ಆರೋಗ್ಯ ಕವಚ ಅಥವಾ ಎಬಿಎಸ್ ಅಂಬುಲೆನ್ಸ್ ವ್ಯವಸ್ಥೆ ಸದುಪಯೋಗ ಪಡೆಯಲು ಮನವರಿಕೆ ಮಾಡಬೇಕು ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಗರ್ಭಿಣಿ ಎಂದು ತಿಳಿದ ದಿನದಿಂದ ಹೆರಿಗೆಯಾಗುವವರೆಗೆ ಮತ್ತು ಹೆರಿಗೆ ನಂತರದ 45 ದಿನಗಳ ಕಾಲ ಬಾಣಂತಿಯ ಅವಧಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವ ಮೂಲಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ರಕ್ತಹೀನತೆ ಮುಂತಾದವುಗಳಿAದ ಗಂಭೀರತೆ ಉಂಟಾಗದAತೆ ಜಾಗೃತಿ ವಹಿಸಲಾಗುತ್ತಿದ್ದು, ನಿಯಮಾನುಸಾರ ಎರಡು ಟಿಡಿ ಚುಚ್ಚುವiದ್ದು, 180 ಕಬ್ಬಿಣಾಂಶ ಮಾತ್ರೆಗಳು, ರಕ್ತಹಿನತೆ ಇದ್ದರೆ 360 ಮಾತ್ರೆಗಳು, ಕ್ಯಾಲ್ಸಿಮ್ ಮಾತ್ರೆ, ಜಂತು ಹುಳು ನಿವಾರಣ ಮಾತ್ರೆಯನ್ನು ಒದಗಿಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. *ಕ್ಷಯವಿಜಯ:* ಕ್ಷಯಮುಕ್ತ ಗಾಮಪಂಚಾಯತ್ ಆಯ್ಕೆ ಮಾಡಲು ಹೆಚ್ಚಿನ ಕ್ಷಯ ಪರೀಕ್ಷೆ ಕೈಗೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಕುರುಗೊಡು ತಾಲೂಕಿನಲ್ಲಿ ಕ್ಷಯವಿಜಯ ಸಂಚಾರಿ ತಂಡವು ಎಕ್ಸ್-ರೇ ಯಂತ್ರದ ಮೂಲಕ ಕ್ಷಯರೋಗ ಗುರ್ತಿಸಿದ ರೀತಿಯಲ್ಲಿ ಎಲ್ಲ ತಾಲೂಕುಗಳಲ್ಲಿ ಕ್ರಮವಹಿಸುವಂತೆ ಜಿಪಂ ಸಿಇಒ ಅವರು ಸೂಚಿಸಿದರು. *ಡೆಂಗ್ಯು ನಿಯಂತ್ರಣ:* ಪ್ರಸ್ತುತ ಡೆಂಗ್ಯೂ ನಿಯಂತ್ರಣದಲ್ಲಿದ್ದು, ರೋಗದ ಕುರಿತು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಮಾಹಿತಿ ನೀಡಬೇಕು ಹಾಗೂ ನಗರದ ಕೊಳಚೆ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸೂಚಿಸಿದರು. *ಆರೋಗ್ಯ ಸಿಂಚನ ಕಾರ್ಯಕ್ರಮ:* ಆರೋಗ್ಯ ಸಿಂಚನ ಕಾರ್ಯಕ್ರಮದಡಿ ಬಾಕಿ ಉಳಿದ 52 ಶಾಲೆಗಳಲ್ಲಿ ವಿಡಿಯೋ ಪ್ರರ್ದಶನ ಕೈಗೊಳ್ಳಬೇಕು. ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳು ಜೊತೆಗೆ ಶಸ್ತçಚಿಕಿತ್ಸಾ ಶಿಬಿರಗಳಲ್ಲಿ ಹೆಚ್ಚಿನ ಫಲಾನುಭವಿಗಳು ಬರುವಂತೆ, ಅಂಧತ್ವ ಮುಕ್ತ ಬಳ್ಳಾರಿ ಅಭಿಯಾನದಡಿ ಶಸ್ತçಚಿಕಿತ್ಸೆ ಹಾಗೂ ಕನ್ನಡಕಗಳ ವಿತರಣೆಗೆ ಕ್ರಮವಹಿಸಿ ಎಂದು ತಿಳಿಸಿದರು. *ಸ್ಥಬ್ದಚಿತ್ರ:* ನ.01 ಕನ್ನಡ ರಾಜ್ಯೋತ್ಸವದಂದು ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ರಾಜ್ಯ ಸರಕಾರ ಅನುಷ್ಟಾನ ಮಾಡುತ್ತಿರುವ ಗೃಹ ಆರೋಗ್ಯ, ಡೆಂಗ್ಯು ಚಿಕುನ್ ಗುನ್ಯಾ ಕುರಿತು ಪರಿಣಾಮಕಾರಿಯಾಗಿ ಸ್ಥಬ್ದಚಿತ್ರದ ಮೂಲಕ ಪ್ರದರ್ಶನದ ಸಿದ್ದತೆಗೆ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗೆ ಸೂಚಿಸಿದರು.. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಿಮ್ಸ್ ಅಧೀಕ್ಷಕ ಡಾ.ಚಿದಂಬರಮೂರ್ತಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಡಾ.ಪೂರ್ಣಿಮಾ ಕಟ್ಟಿಮನಿ, ಡಾ.ಇಂದ್ರಾಣಿ, ಡಾ.ವೀರೇಂದ್ರ ಕುಮಾರ್, ಡಾ.ಹನುಮಂತಪ್ಪ, ಡಿಇಐಸಿ ಮಕ್ಕಳ ತಜ್ಞರಾದ ಡಾ.ತೇಜ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಈರಣ್ಣ, ಡಾ.ಭರತ್, ಆಡಳಿತ ವೈದ್ಯಾಧಿಕಾರಿಗಳಾದ ಡಾ.ಪವನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡಾ.ಜಬೀನ್ ತಾಜ್, ಡಿಪಿಎಮ್ ವೆಂಕೋಬ್ ನಾಯ್ಕ್, ಡಿಎನ್‌ಒ ಗಿರೀಶ್, ಕಾಯಕಲ್ಪ ಸಲಹೆಗಾರ ಡಾ.ಸುರೇಶ್, ಮನೋಹರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. -------------

ಬಳ್ಳಾರಿ: ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ವ್ಯವಸ್ಥಾಪಕರು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ ಹಾಗೂ ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. -----------

ನ.04, 05 ರಂದು ಬಳ್ಳಾರಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಬಳ್ಳಾರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟಗಳನ್ನು ನ.04 ಮತ್ತು 05 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಅವರು ತಿಳಿಸಿದ್ದಾರೆ. ---------

ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಮನವಿ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಈರುಳ್ಳಿ ಜಿಲ್ಲೆಯ ಬೆಳೆಗಳಾಗಿವೆ. ಬೆಳೆ ವಿಮೆಗೆ ಕೊನೆಯ ದಿನ: ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ ಬೆಳೆ ಜೋಳ ನ.15, ಈರುಳ್ಳಿ ಬೆಳೆಗೆ ನ.30. ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ (ಶೇಂಗಾ), ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳಿಗೆ 2025 ರ ಫೆ.28 ಕೊನೆಯ ದಿನವಾಗಿದೆ. ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಬೆಂಗಳೂರು ಓನ್, ಕರ್ನಾಟಕ ಓನ್, ಗ್ರಾಮ ಓನ್ ಸೆಂಟರ್‌ಗಳ ಮೂಲಕ (https://sevasindhuservices.karnataka.gov.in) ಗೆ ಭೇಟಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.23 ಕೊನೆಯ ದಿನವಾಗಿದೆ. ಯೋಜನೆಗಳು: ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.1 ಲಕ್ಷ ಇದರಲ್ಲಿ ರೂ.50,000 ಸಹಾಯಧನ ಮತ್ತು ರೂ.50,000 ಸಾಲ) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ: ವ್ಯಾಪಾರ ಮತ್ತು ಇತರೆ ಸಣ್ಣ ಉದ್ಯಮಗಳಿಗಾಗಿ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ ರೂ.2 ಲಕ್ಷ ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ. ಸ್ವಾವಲಂಭಿ ಸಾರಥಿ: ಸರಕು ವಾಹನ/ಟ್ಯಾಕ್ಸಿ ಉದ್ದೇಶಕ್ಕಾಗಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷ ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ/ಫಲಾನುಭವಿಯ ವಂತಿಕೆ. ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ: ಮಹಿಳಾ ಸ್ವಸಹಾಯ ಸಂಘದ ಕನಿಷ್ಠ 10 ಜನ ಸದಸ್ಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಕಿರು ಆರ್ಥಿಕ ಚಟುವಟಿಕೆಗಳಿಗೆ ಘಟಕ ವೆಚ್ಚ ರೂ.2.50 ಲಕ್ಷ, ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ನಿಗಮದಿಂದ ಸಾಲ ಕಲ್ಪಿಸಲಾಗುವುದು. ಗಂಗಾ ಕಲ್ಯಾಣ ಯೋಜನೆ: ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಖುಷ್ಕಿ, ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಈ ಯೋಜನೆಗೆ ಘಟಕವೆಚ್ಚ ರೂ.3.75 ಲಕ್ಷ (ರೂ.50,000 ಸಾಲ ಒಳಗೊಂಡAತೆ). ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್‌ನ ನಂದಿ ಶಾಲೆ ಹಿಂಭಾಗದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

‘ನನ್ನ ಭಾರತದೊಂದಿಗೆ ದೀಪಾವಳಿ ಕಾರ್ಯಕ್ರಮ’: ಸ್ವಚ್ಛತಾ ಸೇವೆ ಜಾಥಾ ಕಾರ್ಯಕ್ರಮ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ನೆಹರು ಯುವ ಕೇಂದ್ರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆ ಇವರ ಸಹಯೋಗದೊಂದಿಗೆ ‘ನನ್ನ ಭಾರತದೊಂದಿಗೆ ದೀಪಾವಳಿ ಕಾರ್ಯಕ್ರಮ’ದಡಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಚೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಸೇವೆ ಜಾಥಾ ಕಾರ್ಯಕ್ರಮ ನಡೆಯಿತು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ಕಾರ್ಯದರ್ಶಿ ಕೆ.ರ‍್ರಿಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧಿಕಾರಿ ಎಂ.ನAಜುಡಯ್ಯ ಸ್ವಾಮಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್, ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಸ್ವಯಂ ಸೇವಕರು ಭಾಗವಹಿಸಿದ್ದರು. ----------

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರದ 6ನೇ ವಾರ್ಡ್ ಮಾರೆಮ್ಮ ಗುಡಿ ಹತ್ತಿರದ 21 ವರ್ಷದ ಖಾಜಾಹುಸೇನ್ ಎಂಬ ಯುವಕ ಅ.26 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಸಹಾಯಕ ಉಪನಿರೀಕ್ಷರು ಮನವಿ ಮಾಡಿದ್ದಾರೆ. ಯುವಕನ ಚಹರೆ ಗುರುತು: ಎತ್ತರ 5.4 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಅರ್ಧತೋಳಿನ ಟೀ-ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ಹಿಂದಿ ಭಾಷೆಯನ್ನು ಮಾತನಾಡುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಸ್.ಪಿ ಕಚೇರಿ ದೂ.08938-258400, ಸಿರುಗುಪ್ಪ ಉಪ ವಿಭಾಗ ಡಿ.ಎಸ್.ಪಿ ದೂ.08392-276000, ಸಿರುಗುಪ್ಪ ವೃತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಪೊಲೀಸ್ ಠಾಣೆಯ ಪಿ.ಎಸ್.ಐ ದೂ.08396-220333 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಮಂಗಳವಾರ, ಅಕ್ಟೋಬರ್ 29, 2024

ಕರ್ನಾಟಕ ಮಾಧ್ಯಮ ಅಕಾಡೆಮಿ: ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಆಹ್ವಾನ

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2023 ಮತ್ತು 2024 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ”, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ, ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ದತ್ತಿ ಪ್ರಶÀಸ್ತಿ” ಈ ದತ್ತಿ ಪ್ರಶಸ್ತಿಗಳು ತಲಾ 10,000 ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ. *2023 ನೇ ಸಾಲಿನ ಪ್ರಶಸ್ತಿಗಳು:* 2023 ಜನವರಿಯಿಂದ ಡಿಸೆಂಬರ್-2023 ರವರೆಗೆ, ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2023”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2023” ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ಪ್ರಶಸ್ತಿ-2023” ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ “ಅಭಿಮನ್ಯು ದತ್ತಿ ಪ್ರಶಸ್ತಿ -2023” ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು. *2024 ನೇ ಸಾಲಿನ ಪ್ರಶಸ್ತಿಗಳು :* 2024 ಜನವರಿಯಿಂದ ಸೆಪ್ಟೆಂಬರ್ 2024 ರವರೆಗೆ ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2024”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2024” ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿಯಾದ ವರದಿಗೆ “ಅಭಿಮನ್ಯು ಪ್ರಶಸ್ತಿ -2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು. ಕನ್ನಡ ದೈನಿಕ–ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶವಿದ್ದು, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬAಧಿಸಿದ ಪತ್ರಿಕೆಯ ಸಂಪಾದಕರಿAದ ದೃಢೀಕರಣ ಪತ್ರ ಪಡೆದು ಕಳುಹಿಸಬೇಕು. ಲೇಖನ-ವರದಿಗಳನ್ನು ನವೆಂಬರ್ 20 ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ “ಅಭಿಮಾನಿ ಪ್ರಶಸ್ತಿ-2023”, “ಅಭಿಮಾನಿ ಪ್ರಶಸ್ತಿ-2024” ಹಾಗೂ “ಮೈಸೂರು ದಿಗಂತ ಪ್ರಶಸ್ತಿ-2023”, “ಮೈಸೂರು ದಿಗಂತ ಪ್ರಶಸ್ತಿ-2024” “ಪ್ರಜಾ ಸಂದೇಶ ಪ್ರಶಸ್ತಿ-2023”, “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ಅಭಿಮನ್ಯು ಪ್ರಶಸ್ತಿ -2023”, “ಅಭಿಮನ್ಯು ಪ್ರಶಸ್ತಿ-2024” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಥವಾ kmaprashast@gmail.com ಗೆ ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಜಗದೀಶ್ | ಆರೈಕೆದಾರರ ಪಾತ್ರ ಮಹತ್ವದ್ದಾಗಿದೆ

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಮಗುವಿನ ಹುಟ್ಟಿನಿಂದ ಹಿಡಿದು ಜೀವನದ ಪ್ರತಿಯೊಂದು ಹಂತದಲ್ಲಿಯು ಆರೈಕೆದಾರರ ಪಾತ್ರ ಮಹತ್ವದ್ದಾಗಿದೆ ಎಂದು ವಿಶೇಷ ಚೇತನರ ಆರೈಕೆದಾರರು ಹಾಗೂ ವೈದ್ಯರೂ ಆದ ಡಾ.ಜಗದೀಶ್ ಅವರು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ, ಜಿಲ್ಲಾ ಪುನರ್ವಸತಿ ಕೇಂದ್ರ ಹಾಗೂ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬೆಳಗಲ್ ಕ್ರಾಸ್‌ನ ವಿಶ್ವಭಾರತಿ ಕಲಾ ನಿಕೇತನ ಮತ್ತು ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ-2024 ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಆರೈಕೆದಾರರ ಪಾತ್ರದ ಬಗ್ಗೆ, ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರ್ಕಾರದ ಯೋಜನೆಗಳನ್ನು ಆರೈಕೆದಾರರಿಗೆ ತಲುಪುವಂತಹ ಕೆಲಸವಾಗಬೇಕು. ಜೊತೆಗೆ ಅವರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ತಿಳಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ.ಹೆಚ್.ಎA ಅವರು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆರೈಕೆದಾರರ ಪಾತ್ರವು ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿ ಬಹಳ ಪ್ರಮುಖವಾಗಿದ್ದು, ಅವರಿಂದ ಮಾತ್ರ ವಿಕಲಚೇತನರ ಪುನರ್ವಸತಿ ಹಾಗೂ ಹಿರಿಯ ನಾಗರಿಕರ ಪುನರ್ವಸತಿ ಸಾಧ್ಯ ಎಂದರು. ನಮ್ಮ ಆರೈಕೆದಾರರನ್ನು ಗೌರವಿಸುವುದರ ಜೊತೆಗೆ ಮುಪ್ಪಿನ ಕಾಲದಲ್ಲಿ ಅಸಹಾಯಕರಾಗಿರುವ ಹಿರಿಯರನ್ನು ಆರೈಕೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳ ಅಭಿವೃದ್ದಿಗಾಗಿ ಶ್ರಮಿಸಿ ಪಾಲನೆ-ಪೋಷಣೆ ಮಾಡಿದ ಡಾ.ಜಗದೀಶ್, ಶೇಕಂಬಿ, ವಿ.ಲಕ್ಷಿö್ಮÃದೇವಿ, ರಾಮಲಕ್ಷಿö್ಮÃ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ನಾಗೇಂದ್ರ, ಚೆಂಗಾರೆಡ್ಡಿ ಬುದ್ದಿಮಾಂದ್ಯ ಮಕ್ಕಳ ಸಂಸ್ಥೆಯ ಮುಖೋಪಾದ್ಯಯರಾದ ಚಂದ್ರಶೇಖರ್, ಸೈಲ್ ಸಂಸ್ಥೆಯ ಮುಖ್ಯಸ್ಥ ಉಮಾಪತಿಗೌಡ, ಡಾ.ಭೀಮಾವಿದ್ಯಾ ಸಂಸ್ಥೆಯ ಮುಖ್ಯಸ್ಥ ಹೆಚ್.ಎಂ.ಮಹೇಶ್‌ಕುಮಾರ್, ವಿಶ್ವ ಭಾರತಿ ಕಲಾನಿಕೇತನ ಸಂಸ್ಥೆಯ ಮುಖ್ಯಸ್ಥ ಹೆಚ್.ಗುರುಮೂರ್ತಿ, ವಿಶೇಷ ಶಿಕ್ಷಕರಾದ ಸೋಮನಾಥ ಹಿರೇಮಠ ಸೇರಿದಂತೆ ಜಿಲ್ಲೆಯ ಎಂ.ಆರ್.ಡಬ್ಲೂö್ಯ, ವಿ.ಆರ್.ಡಬ್ಲೂö್ಯ ಯು.ಆರ್.ಡಬ್ಲೂö್ಯ ಹಾಗೂ ಇಲಾಖೆಯ ಸಿಬ್ಬಂದಿಗಳು, ವಿಶೇಷ ಚೇತನ ಮಕ್ಕಳ ಆರೈಕೆದಾರರು ಉಪಸ್ಥಿತರಿದ್ದರು. ----------

ಸಂಡೂರು ವಿಧಾನಸಭೆ ಉಪಚುನಾವಣೆ; 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬAಧಿಸಿದAತೆ, ಸೋಮವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಸಂಡೂರು ಕ್ಷೇತ್ರಕ್ಕೆ ಸಲ್ಲಿಸಿದ್ದ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅ.30 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ----------

ಬಳ್ಳಾರಿಯಲ್ಲಿ 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವವಿದೆ: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವ ಇದ್ದು, ಅದನ್ನು ಬಲಪಡಿಸುವತ್ತ ಗಮನಹರಿಸಬೇಕು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಎಂದು ಹೇಳಿದರು. ನಗರದ ಜಿಪಂ ನ ಹಳೆಯ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದವು ಪುರಾತನ ಕಾಲದಿಂದಲೂ ಮಹತ್ವ ಪಡೆದುಕೊಂಡಿದೆ. ಪರಿಸರದಲ್ಲಿ ದೊರೆಯುವ ಗಿಡಮೂಲಿಕೆಗಳಿಂದ ತಯಾರಾದ ಔಷಧಿಗಳು ಜನಸಾಮಾನ್ಯರ ಉತ್ತಮ ಆರೋಗ್ಯಕ್ಕೆ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. ಪೂರ್ವಜರು ದವಾಖಾನೆಗಳಿಗಿಂತ ಹೆಚ್ಚಾಗಿ ಆಯುರ್ವೇದ ಔಷಧಿಗಳ ತಯಾರಿಸಿಕೊಂಡು ಸುಸ್ಥಿರ ಆರೋಗ್ಯ ಹೊಂದಿದ್ದರು. ಪ್ರಸ್ತುತ ದಿನಮಾನಗಳಲ್ಲಿ ಜಾಗತಿಕವಾಗಿ ಉತ್ತಮ ಆರೋಗ್ಯ ಹೊಂದಲು ಆಯುರ್ವೇದದ ನಾವೀನ್ಯತೆ ಹಾಗೂ ಆಯುರ್ವೇದದ ಆವಿಷ್ಕಾರವಾಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್.ಸರಳಾದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಯುರ್ವೇದವು ವಿಶ್ವ ಆರೋಗ್ಯ ಸಂಸ್ಥೆಯಿAದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ಮಾನ್ಯತೆ ಪಡೆದಿದೆ. ಕೇಂದ್ರ ಆಯುಷ್ ಸಚಿವಾಲಯವು ಧನ್ವಂತರಿ ಜಯಂತಿಯನ್ನು 2016 ರ ಅಕ್ಟೋಬರ್ 29 ರಂದು ರಾಷ್ಟಿçÃಯ ಆಯುರ್ವೇದ ದಿನವನ್ನಾಗಿ ಘೋಷಿಸಿದೆ ಎಂದು ತಿಳಿಸಿದರು. ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಆಯುರ್ವೇದ ಮಹತ್ವ ತಿಳಿಸಲು ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಸಪ್ತಾಹ ಕಾರ್ಯಕ್ರಮದಡಿ ಕಳೆದ ಏಳು ದಿನಗಳಿಂದ ನಾನಾ ಸ್ಥಳಗಳಲ್ಲಿ ವಿವಿಧ ಸಂಘ ಸಂಸ್ಥೆಗಳೊಡನೆ ಜೊತೆಗೂಡಿ ಆಯುರ್ವೇದ ಮಹತ್ವ ಸೇರಿದಂತೆ ಆಯುರ್ವೇದದ ಹಲವು ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ, ವಿದ್ಯಾರ್ಥಿಗಳಲ್ಲಿ ಹಾಗೂ ಹೆಚ್ಚಾಗಿ ಮಹಿಳೆಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕು ಆಯುರ್ವೇದ ಆಸ್ಪತ್ರೆ ಮತ್ತು 45 ಆಯುರ್ವೇದ ಚಿಕಿತ್ಸಾಲಯಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಲಿದ್ದು, ಸಾರ್ವಜನಿಕರು ಆಯುರ್ವೇದ ಚಿಕಿತ್ಸೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಇದೇ ವೇಳೆ ಧನ್ವಂತರಿ ಶ್ಲೋಕ ಪಟಿಸಲಾಯಿತು ಹಾಗೂ ಆಯುರ್ವೇದ ಪಿತಾಮಹರಾದ ಧ್ವನಂತರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಬಳಿಕ ಜಿಲ್ಲೆಯ ಆಯುರ್ವೇದ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ನಿವೃತ್ತ ವೈದ್ಯಾಧಿಕಾರಿ ಡಾ.ಉಮೇಶ್, ಮಾಜಿ ಸೈನಿಕ ಸುಭಾಷ್ ಚಂದ್ರ ಬೋಸ್, ಕೆಜಿಎಂ ಜಿಲ್ಲಾಧ್ಯಕ್ಷೆ ಡಾ.ಭಾರತಿ ಸಂಗಮ್ ಸೇರಿದಂತೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. --------

ಸ್ವಚ್ಚತೆಯೊಂದಿಗೆ ದೀಪಾವಳಿ ಹಬ್ಬ ಆಚರಿಸಿ: ಮೊಂಟು ಪಾತರ್

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಈ ಬಾರಿಯ ದೀಪಾವಳಿ ಹಬ್ಬವನ್ನು ಪ್ರತಿಯೊಬ್ಬರೂ ಸ್ವಚ್ಛತೆಯೊಂದಿಗೆ ಆಚರಿಸಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್ ಅವರು ಹೇಳಿದರು. ಕೇಂದ್ರ ಸರ್ಕಾರದ ಸ್ಥಾಯಿ ಸಂಸ್ಥೆಯಾದ ನೆಹರು ಯುವ ಕೇಂದ್ರ, ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆ ಇವರ ಸಹಯೋಗದಲ್ಲಿ ‘ನನ್ನ ಭಾರತದೊಂದಿಗೆ ದೀಪಾವಳಿ ಕಾರ್ಯಕ್ರಮ’ ಅಂಗವಾಗಿ ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಚ್ಛತಾ ಸೇವೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಸ್ಥ ಹಾಗೂ ಸುಂದರ ಸಮಾಜ ನಿರ್ಮಾಣದಲ್ಲಿ ಸ್ವಚ್ಛತೆಯ ಪಾತ್ರ ಬಹಳ ಮುಖ್ಯವಾಗಿದೆ. ಹಾಗಾಗಿ ವ್ಯಾಪಾರಸ್ಥರು ಅಂಗಡಿ ಹಾಗೂ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಹೇಳಿದರು. ನೆಹರೂ ಯುವ ಕೇಂದ್ರದಿAದ ಅಕ್ಟೋಬರ್ 30 ರ ವರೆಗೆ ನನ್ನ ಭಾರತದೊಂದಿಗೆ ದೀಪಾವಳಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾರುಕಟ್ಟೆ, ಆಸ್ಪತ್ರೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಂಚಾರ ಜಾಗೃತಿ ಮೊದಲಾದವು ಅಭಿಯಾನದ ಭಾಗವಾಗಿವೆ. ಪ್ರತಿಯೊಬ್ಬರೂ ಮನೆ, ಸುತ್ತಮುತ್ತಲಿನ ಆವರಣ ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಸೇವೆಯ ಜಾಗೃತಿ ಜಾಥಾ ನಡೆಸಲಾಯಿತು ಜಾಥಾವು ನಗರದ ರಾಘವೇಂದ್ರ ಟಾಕೀಸ್, ವಡ್ಡರಬಂಡಿ, ಪ್ರಭಾತ್ ಟಾಕೀಸ್ ವ್ಯಾಪ್ತಿಯಲ್ಲಿ ಸಂಚರಿಸಿ ದಿನನಿತ್ಯದ ಕಸ ವಿಲೇವಾರಿ ಕುರಿತು ಅಂಗಡಿಯವರಿಗೆ ಅರಿವು ಮೂಡಿಸಲಾಯಿತು. ಈ ವೇಳೆ ಅಂಕಿ ಸಂಖ್ಯೆಗಳ ಇಲಾಖೆಯ ಅಧಿಕಾರಿಗಳಾದ ಮನಿಶ್ ಕುಮಾರ, ಮಿತೇಶ ವಿಶ್ವಕರ್ಮ ಸೇರಿದಂತೆ ಸ್ವಯಂ ಸೇವಕರು ಹಾಗೂ ಇತರರು ಭಾಗವಹಿಸಿದ್ದರು. ----------

ಸೋಮವಾರ, ಅಕ್ಟೋಬರ್ 28, 2024

ಅ.29 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿಮಿತ್ತ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಅ.29 ರÀಂದು ಬೆಳಿಗ್ಗೆ 06 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಎಫ್-24 ಫೀಡರ್ ವ್ಯಾಪ್ತಿಯ ನಗರದ ಬೆಂಗಳೂರು ರಸ್ತೆಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯ ತೋರಣಗಲ್ಲು ರೈಲ್ವೇ ಸ್ಟೇಷನ್ ನಿವಾಸಿಯಾದ ರಾಮಕೃಷ್ಣ ಕನ್ನೆಟಿ ಎನ್ನುವ 28 ವರ್ಷದ ಯುವಕ ಅ.14 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಯುವಕನ ಚಹರೆ ವಿವರ: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.083935-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಬಿಐಟಿಎಂ ಕಾಲೇಜಿನಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ | ಲಂಚದ ಬೇಡಿಕೆಯಿಟ್ಟರೆ ದೂರು ಸಲ್ಲಿಸಿ: ಲೋಕಾಯುಕ್ತ ಎಸ್‌ಪಿ ಸಿದ್ದರಾಜು.ಸಿ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ, ನೌಕರರು ನಿಮ್ಮ ನ್ಯಾಯಯುತವಾದ ಕೆಲಸವನ್ನು ಮಾಡಿಕೊಡಲು ಲಂಚದ ಹಣಕ್ಕಾಗಿ ಒತ್ತಾಯಿಸಿದರೆ ಲೋಕಾಯುಕ್ತ ಕಚೇರಿಗೆ ದೂರು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಸೂಪರಿಂಟೆAಡೆAಟ್ ಆಫ್ ಪೊಲೀಸ್ ಸಿದ್ದರಾಜು.ಸಿ ಅವರು ಹೇಳಿದರು. ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಕಚೇರಿ, ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಬಿಐಟಿಎಂ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕ ಕೆಲಸಗಳಿಗಾಗಿ ಸಲ್ಲಿಸಿದ ಅರ್ಜಿಗಳಿಗೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡಿದರೆ, ಕಿರುಕುಳ ನೀಡಿದರೂ ದೂರು ಹೇಳಬಹುದು ಎಂದು ತಿಳಿಸಿದರು. ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕ ಹುದ್ದೆಯನ್ನು ಬಳಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಲ್ಲಿ ಅಥವಾ ಹುದ್ದೆಯ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ಮಾಡುತ್ತಿರುವುದು ಕಂಡು ಬಂದಲ್ಲಿ, ನಿಯಮ ಬಾಹಿರ ಆದೇಶ ಅಥವಾ ಕಾರ್ಯ ನಡೆಯುತ್ತಿದ್ದಲ್ಲಿ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ಕಚೇರಿ ಅಥವಾ ಮೊ.9364062511, 9364062630 ಗೆ ಸಂಪರ್ಕಿಸಬಹುದು ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಡೆಪ್ಯೂಟಿ ಸೂಪರಿಂಟೆAಡೆAಟ್ ಆಫ್ ಪೊಲೀಸ್ ಆರ್.ವಸಂತ್‌ಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಮೊಹಮ್ಮದ್ ರಫಿ, ಸಂಗಮೇಶ್, ಬಿಐಟಿಎಂ ಕಾಲೇಜಿನ ಪ್ರಾಚಾರ್ಯರಾದ ಡಾ.ಯಡವಳ್ಳಿ ಬಸವರಾಜ್, ಡೀನ್ (ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ) ಡಾ.ವಿ.ಸಿ.ಪಾಟೀಲ್, ಚೈತನ್ಯರೆಡ್ಡಿ, ಬಿಐಟಿಎಂ ರಾಷ್ಟಿçÃಯ ಸೇವಾ ಯೋಜನೆಯ ಇನ್‌ಚಾರ್ಜ್ ಡಾ.ಶೇಕ್‌ಮೀರ.ಡಿ, ಸಹಪ್ರಾಧ್ಯಾಪಕರಾದ ಗುರುರಾಜ್, ಯೋಗನಂದ ಪತ್ತಾರ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು. ----------

ನ.01 ರಂದು 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಬಳಿಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಸಂದೇಶ ನೀಡುವರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕರ್ನಾಟಕ ರಾಜ್ಯೋತ್ಸವ ಅಚರಣಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ---------

ಸಂಡೂರು ವಿಧಾನಸಭೆ ಉಪಚುನಾವಣೆ-2024 | ಚುನಾವಣಾ ಅಕ್ರಮ ತಡೆಯಲು ಸಾರ್ವಜನಿಕರು ಸಿ-ವಿಜಿಲ್ ಆಪ್‌ನಲ್ಲಿ ದೂರು ಸಲ್ಲಿಸಿ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಸಹಭಾಗಿತ್ವವೂ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್‌ಅನ್ನು ಅಭಿವೃದ್ಧಿಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾಟ್ಫೋðನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವೀಕ್ಷಿಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್‌ನೊಂದಿಗೆ, ನಿಮ್ಮ ಸ್ಮಾಟ್ಫೋðನ್‌ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದಾಗಿದೆ. ಇದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ. ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೋಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಾರ್ವಜನಿಕರು ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್) ಮೂಲಕ ದೂರು ನೀಡಬಹುದು. ಸಿ-ವಿಜಿಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? ಮೊದಲು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ನೀವು ಸಾಕ್ಷಿಯಾಗಿರುವ ಯಾವುದೇ ಚುನಾವಣಾ ಸಂಬAಧಿತ ಉಲ್ಲಂಘನೆಗಳ ಫೋಟೋಗಳು ಅಥವಾ ವೀಡಿಯೊಗಳನ್ನು ಸೆರೆಹಿಡಿಯಿರಿ. ನಿಮ್ಮ ವರದಿಯನ್ನು ಅಪ್ಲಿಕೇಶನ್ ಮೂಲಕ ಅಪ್‌ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬAಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ. ಸಿ-ವಿಜಿಲ್ ಆಪ್ ಕಾರ್ಯ ಹೇಗೆ?: ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು ಫೋಟೋ ಮತ್ತು ವಿಡಿಯೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್‌ನಲ್ಲಿ ಅಪ್‌ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ. ಏನೆಲ್ಲಾ ದೂರು ನೀಡಬಹುದು?: ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೋರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೋಸ್ಟರ್, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದನಾಕಾರಿ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧದ ಅವಧಿಯಲ್ಲೂ ಪ್ರಚಾರ, ಮತದಾನದ ದಿನದಂದು ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್‌ನಲ್ಲಿ ದೂರು ಕೊಡಬಹುದು. ಒಟ್ಟು 16 ರೀತಿಯ ದೂರುಗಳನ್ನು ಇದರಡಿ ನೀಡಬಹುದು. 100 ನಿಮಿಷಗಳಲ್ಲಿ ಸಿಗಲಿದೆ ಉತ್ತರ: ಆಪ್‌ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗೆ ಅಧಿಕಾರಿಗಳ ಉತ್ತರ ಸಿಗಲಿದೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ. ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬAಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೆöÊಯಿಂಗ್ ಸ್ಕಾ÷್ವಡ್ ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ. ಸಿ-ವಿಜಿಲ್ ತಂಡ ಸಕ್ರಿಯ: ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈಗಾಗಲೇ ಸಿ-ವಿಜಿಲ್ ತಂಡ ಕಾರ್ಯಗತವಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಗೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಒಟ್ಟು 16 ದೂರುಗಳು ಸಿ-ವಿಜಿಲ್ ಮುಖಾಂತರ ದಾಖಲಾಗಿದ್ದು, 13 ಪ್ರಕರಣಗಳು ವಿಲೇ ಮಾಡಲಾಗಿದೆ. ಕಂಟ್ರೋಲ್ ರೂಂ: ಮತದಾರರಿಗೆ ಅಗತ್ಯ ಮಾಹಿತಿ, ಮತದಾರರ ಗುರುತಿನ ಚೀಟಿ ಸಂಬAಧಿತ ಇತರೆ ಮಾಹಿತಿ ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿರುವ ಕಂಟ್ರೋಲ್ ರೂಂ ಅಥವಾ ಮತದಾರರ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬAಧಿಸಿದAತೆ, ಇಲ್ಲಿಯವರೆಗೆ 13 ಕರೆಗಳು ಸ್ವೀಕರಿಸಿದ್ದು, ಸಂಬAಧಿಸಿದ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಒದಗಿಸಲಾಗುತ್ತಿದೆ. ‘ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಯುತವಾಗಿ ನಡೆಸಲು ಯಾವುದೇ ಚುನಾವಣೆ ಅಕ್ರಮ, ಆಮಿಷ ತಡೆಲು ಸಿವಿಜಿಲ್ ಬಳಸುವ ಮೂಲಕ ಎಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವದ ರಕ್ಷಕರಾಗೋಣ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ----------

ಶುಕ್ರವಾರ, ಅಕ್ಟೋಬರ್ 25, 2024

ಸಂಡೂರು ವಿಧಾನಸಭೆ ಉಪಚುನಾವಣೆ-2024 |ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಮೂವರು ನಾಮಪತ್ರ ಸಲ್ಲಿಕೆ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್.ಅಂಜಿನಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಟಿ.ಎಂ.ಮಾರುತಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ಮೂರು ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು ಏಳು ಅಭ್ಯರ್ಥಿಗಳು ಒಟ್ಟು 13 ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್.ವೆಂಕಣ್ಣ, ಟಿ.ರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ.ಎಂ.ಮಾರುತಿ ಇವರುಗಳು ಒಂದೊAದು ನಾಮಪತ್ರ ಸಲ್ಲಿಸಿದ್ದರೆ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ.ಅನ್ನಪೂರ್ಣ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಅದೇರೀತಿಯಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್.ಅಂಜಿನಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ. ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.30 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ----------

ಸರಳಾದೇವಿ ಕಾಲೇಜಿನಲ್ಲಿ ಆಯೋಡಿನ್‌ಯುಕ್ತ ಉಪ್ಪಿನ ಕುರಿತ ಜಾಗೃತಿ | ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ: ಡಾ.ಮರಿಯಂಬಿ.ವಿ.ಕೆ.

ಬಳ್ಳಾರಿ,ಅ.25(ಕರ್ನಾಟಕ ವಾತೆ) : ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪನ್ನೇ ಬಳಸುವ ಮೂಲಕ ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣದ ಕಾರ್ಯಕ್ರಮಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ‘ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಹಾಗೂ ಸಪ್ತಾಹ’ ಕಾರ್ಯಕ್ರಮದ ಅಂಗವಾಗಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆಯೋಡಿನ್‌ಯುಕ್ತ ಉಪ್ಪಿನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ‘ಅಯೋಡಿನ್‌ಯುಕ್ತ ಉಪ್ಪಿನ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಯೋಡಿನ್ ಮನುಷ್ಯನಿಗೆ ಅತ್ಯಗತ್ಯವಾಗಿ ಬೇಕಾಗುವ ಒಂದು ಸೂಕ್ಷö್ಮ ಪೋಷಕಾಂಶವಾಗಿದೆ. ಇದು ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯಕವಾಗಿರುತ್ತದೆ ಎಂದು ತಿಳಿಸಿದರು. ಥೈರಾಯಿಡ್ ಗ್ರಂಥಿಯು ನಮ್ಮ ದೇಹಕ್ಕೆ ಅವಶ್ಯಕವಿರುವ ಹಾರ್ಮೋನ್‌ಗಳನ್ನು ಉತ್ಪತ್ತಿ ಮಾಡಲು ಅಯೋಡಿನ್ ಅಂಶ ಅಗತ್ಯವಾಗಿದೆ. ನಾವುಗಳು ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪನ್ನೇ ಬಳಸಬೇಕು. ದಿನ ನಿತ್ಯ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ಬಳಸಬೇಕು. ತಾಜಾ ತರಕಾರಿಯೊಂದಿಗೆ ಅಯೋಡಿನ್‌ಯುಕ್ತ ಉಪ್ಪು ಬಳಕೆ ಮಾಡಬೇಕು. ಇದರಿಂದ ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನ್ಯತೆಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು. ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳ ಅಡಿಯಲ್ಲಿ ಪ್ರತಿ ತಿಂಗಳು ಪ್ರತಿ ಒಬ್ಬ ಆಶಾ ಕಾರ್ಯಕರ್ತರಿಂದ 50 ಮನೆಗಳ ಉಪ್ಪಿನ ಮಾದರಿಗಳನ್ನು ಪರೀಕ್ಷಿಸುವ ಮೂಲಕ ಉಪ್ಪಿನಲ್ಲಿ ಅಯೋಡಿನ್ ಅಂಶದ ಬಗ್ಗೆ ಪರೀಕ್ಷೆ ನಡೆಸುವ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಚನ್ನಬಸಯ್ಯ, ಬಿಬಿಎ ವಿಭಾಗದ ಹೆಚ್‌ಓಡಿ ಡಾ.ಪಲ್ಲವಿ, ಎನ್‌ಸಿಡಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ.ಜಬೀನ್‌ತಾಜ್, ಜಿಲ್ಲಾ ಎಪಿಡಮಾಲಾಜಿಸ್ಟ್ ಡಾ.ನಿವೇದಿತಾ, ಜಿಲ್ಲಾ ಮೈಕ್ರೋಬಯಾಲಾಜಿಸ್ಟ್ ಶರತ್ ಬಾಬು, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ಜಿಲ್ಲಾ ಕಾಲರಾ ನಿಯಂತ್ರಣ ತಂಡದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. --------

ಸಾಕಿದ ಅಥವಾ ಬೀದಿ ನಾಯಿ ಕಚ್ಚದರೆ, ಉಗುರಿನಿಂದ ಪರಚಿದರೆ ನಿರ್ಲಕ್ಷö್ಯ ವಹಿಸದೇ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯಿರಿ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಸಾಮಾನ್ಯವಾಗಿ ಸಾಕಿದ ನಾಯಿಗಳು ಕಚ್ಚಿದರೆ, ಉಗುರಿನಿಂದ ಪರಚಿದರೆ ಅಥವಾ ನಮ್ಮ ಮೈ ಮೇಲಿರುವ ಈಗಾಗಲೆ ಇರುವ ಗಾಯವನ್ಮು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷö್ಯ ವಹಿಸದೇ ಸೋಪು ಮತ್ತು ನೀರಿನಿಂದ ತೊಳೆದು ಹತ್ತಿರದ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ರೇಬಿಸ್ ನಿರೋಧಕ ಚುಚ್ಚುಮದ್ದು ಪಡೆಯಬೇಕು ಎಂದು ಜಿಲ್ಲಾ ಸರ್ವೇಕ್ಷಣಧಿಕಾರಿ ಹಾಗೂ ರಾಷ್ಟಿçÃಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ ನೋಡಲ್ ಅಧಿಕಾರಿ ಡಾ.ಮರಿಯಂಬಿ.ವಿ.ಕೆ ಹೇಳಿದರು. ನಗರದ ಮುಂಡ್ರಿಗಿ ಬಡಾವಣೆಯಲ್ಲಿ ನಾಯಿ ಕಡಿತ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ನೀಡುತ್ತಾ ಮಾತನಾಡಿ, ಸೋಂಕುವುಳ್ಳ ನಾಯಿ ಕಡಿತದಿಂದ ಮಾರಣಾಂತಿಕ ರೇಬೀಸ್ ಕಾಯಿಲೆಯನ್ನು ಹರಡುವುದನ್ನು ತಡೆಗಟ್ಟಬಹುದಾಗಿದ್ದು, ವೈದ್ಯರ ಸಲಹೆಯಂತೆ ರೇಬಿಸ್ ಚುಚ್ಚುಮದ್ದನ್ನು ಮೊದಲ ದಿನ, 3ನೇ ದಿನ, 7ನೇ ದಿನ, 14ನೇ ದಿನ, 28 ದಿನ ತಪ್ಪದೇ ಲಸಿಕೆ ಪಡೆಯಬೇಕು ಎಂದು ವಿನಂತಿಸಿದರು. ಈ ವೇಳೆ ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೇಗುಫ್ತಾ ಷಾಹೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎಪಡಮಲಾಜಿಸ್ಟ್ ಡಾ.ನಿವೇದಿತಾ, ಮೈಕ್ರೋಬಯಾಲಜಿಸ್ಟ್ ಶರತ್‌ಕುಮಾರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ ಸೇರಿದಂತೆ ಪ್ರಯೋಗಾಲಯ ತಂತ್ರಜ್ಞರು, ಸಿಬ್ಬಂದಿಯವರು ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಉಪಸ್ಥಿತರಿದ್ದರು. ---------

ಬಳ್ಳಾರಿ ಮಹಾನಗರ ಪಾಲಿಕೆ | ಮ್ಯಾನ್ಯುಯಲ್ ಸ್ಕಾö್ಯವೆಂಜರ್ ಸಮೀಕ್ಷೆ; ಶಿಬಿರದಲ್ಲಿ ಪಾಲ್ಗೊಂಡು ನೋಂದಾಯಿಸಿಕೊಳ್ಳಲು ಸೂಚನೆ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕಾö್ಯಯಂಜಿAಗ್ ಕಾರ್ಯದಲ್ಲಿ ದೈಹಿಕವಾಗಿ ತೊಡಗಿಸಿಕೊಂಡವರಿದ್ದಲ್ಲಿ ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ದಿನಗಳಂದು ಏರ್ಪಡಿಸಲಾಗುವ ಶಿಬಿರದಲ್ಲಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. *ಬೇಕಾದ ದಾಖಲೆ:* ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಒಂದು ಭಾವಚಿತ್ರ (ಅಳತೆ 6*4), ಬ್ಯಾಂಕ್ ಖಾತೆಯ ಪಾಸ್‌ಬುಕ್‌ನ ಮುಖಪುಟದ ಪ್ರತಿ (ಮೂಲ ಪುಸ್ತಕವನ್ನು ಸಹ ತರಬೇಕು). ಆಧಾರ್ ಪ್ರತಿ (ಮೂಲ ಪ್ರತಿ ಸಹ ತರಬೇಕು), ಮ್ಯಾನ್ಯುಯಲ್ ಸ್ಕಾö್ಯವೆಂಜಿAಗ್ ಕಾರ್ಯನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರ ಸಲ್ಲಿಸಬೇಕು. ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲ ಸ್ವಚ್ಛಗೊಳಿಸುವುದು, ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವುದು, ಈ ಕಾರ್ಯಗಳಲ್ಲಿ ತೊಡಗಿರುವವರು ಯಾವುದೇ ವ್ಯಕ್ತಿಗಳಿದ್ದಲ್ಲಿ ಮೇಲ್ಕಂಡ ದಿನದಂದು ನಡೆಯುವ ಶಿಬಿರದಲ್ಲಿ ಭಾಗವಹಿಸಬಹುದು. *ಶಿಬಿರ ಆಯೋಜನೆಯ ಸ್ಥಳ ಮತ್ತು ದಿನಾಂಕ:* ಅ.27 ರಂದು ಬೆಳಿಗ್ಗೆ 10.30 ಗಂಟೆಯಿAದ ಸಂಜೆ 5.30ರವರೆಗೆ ಗಂಟೆಯವರೆಗೆ ಬಳ್ಳಾರಿಯ ಕೌಲ್‌ಬಜಾರ್‌ನ ದಾನಪ್ಪ ಬೀದಿಯ ಶ್ರೀರಾಮ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಶಿಬಿರ ಆಯೋಜಿಸಲಾಗಿದೆ. (ಸಂಪರ್ಕಿಸಬಹುದಾದ ವ್ಯಕ್ತಿ- ವಿ.ಪರಶುರಾಮ ಮೊ:8123600703 ಮತ್ತು ಮಲ್ಲೇಶ್ವರಂ ಮೊ:9980014529). ಅ.27 ರಂದು ಬೆಳಿಗ್ಗೆ 10.30 ಗಂಟೆಯಿAದ ಸಂಜೆ 5.30ರವರೆಗೆ ಗಂಟೆಯವರೆಗೆ ನಗರದ ತಾಳೂರು ರಸ್ತೆಯ ಭಗತ್ ಸಿಂಗ್ ನಗರದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. (ಸಂಪರ್ಕಿಸಬಹುದಾದ ವ್ಯಕ್ತಿ-ಶೇಖರ್ ಮೊ:9731524306) ಅ.28 ರಂದು ಬೆಳಿಗ್ಗೆ 10.30 ಗಂಟೆಯಿAದ ಸಂಜೆ 5.30ರವರೆಗೆ ಗಂಟೆಯವರೆಗೆ ನಗರದ ಶ್ರೀರಾಂಪುರA ಕಾಲೋನಿಯ ಶ್ರೀರಾಮ ದೇವಸ್ಥಾನ ಆವರಣದಲ್ಲಿ ಶಿಬಿರ ಆಯೋಜಿಸಲಾಗಿದೆ. (ಸಂಪರ್ಕಿಸಬಹುದಾದ ವ್ಯಕ್ತಿ- ಜಿ.ಆರ್ ರಾಮೇಶ್ವರ್ ಮೊ:9448580449, ನಾರಾಯಣ ಸ್ವಾಮಿ ಮೊ:8951012144) ಅ.28 ರಂದು ಬೆಳಿಗ್ಗೆ 10.30 ಗಂಟೆಯಿAದ ಸಂಜೆ 5.30ರವರೆಗೆ ಗಂಟೆಯವರೆಗೆ ನಗರದ ಬಾಪೂಜಿ ನಗರದಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಬಿರ ಏರ್ಪಡಿಸಲಾಗಿದೆ. (ಸಂಪರ್ಕಿಸಬಹುದಾದ ವ್ಯಕ್ತಿ- ಗಂಗಾಧರ ಮೊ:9880057191) ಶಿಬಿರದಲ್ಲಿ ನೋಂದಾಯಿಸಿಕೊಳ್ಳದೇ ಇದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಸಂಡೂರು ವಿಧಾನಸಭೆ ಉಪಚುನಾವಣೆ-2024: ಚುನಾವಣಾ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಗೆ ದಿನ ಮತ್ತು ಸ್ಥಳ ನಿಗದಿ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಅಂಗವಾಗಿ ಚುನಾವಣೆಯಲ್ಲಿರುವ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಮುಂದೆ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಲು ದಿನ ಮತ್ತು ಸ್ಥಳ ನಿಗದಿಪಡಿಸಲಾಗಿದೆ. *ನಿಗದಿಪಡಿಸಿದ ದಿನ ಮತ್ತು ಸ್ಥಳ:* ಮೊದಲನೇ ಬಾರಿಯ ಪರಿಶೀಲನೆಯು ನ.03 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ, ಎರಡನೇ ಬಾರಿಯ ಪರಿಶೀಲನೆಯು ನ.07 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಹಾಗೂ ಮೂರನೇ ಬಾರಿಯ ಪರಿಶೀಲನೆಯು ನ.11 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಸಂಡೂರು ತಾಲ್ಲೂಕು ಕಚೇರಿಯ 95-ಸಂಡೂರು (ಪ.ಪಂ) ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಲೆಕ್ಕ ಪತ್ರಗಳ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಮುಂದೆ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಬೇಕು ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ---------

ಸಂಡೂರು ವಿಧಾನಸಭೆ ಉಪಚುನಾವಣೆ: ಚುನಾವಣಾ ವೆಚ್ಚ ವೀಕ್ಷಕರ ನೇಮಕ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಮುರಳಿರಾವ್ ಆರ್.ಜೆ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬAಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.9141142754 ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ---------

ಪಿಸಿ, ಪಿಎನ್‌ಡಿಟಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಲಿಂಗ ಆಯ್ಕೆ ನಿಷೇಧ ಅಧಿನಿಯಮ-1994 ಕಾಯ್ದೆ (ಪಿಸಿ ಅಂಡ್ ಪಿಎನ್‌ಡಿಟಿ ಕಾಯ್ದೆ) ಅನ್ವಯ ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದೆ. ಜಿಲ್ಲೆಯಾದ್ಯಂತ ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು. ಶುಕ್ರವಾರದಂದು, ನಗರದ ನೂತನ ಜಿಲ್ಲಾಡಳಿತ ಭವನದ ವಿಡೀಯೋ ಸಭಾಂಗಣದಲ್ಲಿ ಪಿಸಿ, ಪಿಎನ್‌ಡಿಟಿ ಕಾಯ್ದೆ 1994 ಮತ್ತು ಕೆಪಿಎಂಇ ಕುರಿತಂತೆ ಜಿಲ್ಲಾ ಮಟ್ಟದ ಕಾರ್ಯಪಡೆಯ ಕಾರ್ಯವೈಖರಿಯ ಕುರಿತು ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಪುರುಷ-ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಈ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು. ಪಿಸಿ ಅಂಡ್ ಪಿಎನ್‌ಡಿಟಿ ಕಾಯ್ದೆಯನ್ವಯ ನಿಯಮಾನುಸಾರ ಅನುಮತಿ ಪಡೆದು ನಡೆಯುತ್ತಿರುವ ಅಲ್ಟಾçಸೌಂಡ್ ಸ್ಕಾö್ಯನಿಂಗ್ ಕೇಂದ್ರಗಳಲ್ಲಿ ಪ್ರತಿ ಪ್ರಕರಣದ ಮಾಹಿತಿಯನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು. ಆಯಾ ದಿನವೇ ನಮೂನೆ-ಎಫ್‌ನಲ್ಲಿ ವರದಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಈ ಕಾರ್ಯ ಮಾಡದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಮಹಿಳೆಯರು ಕೂಡ ಸಮಾಜದಲ್ಲಿ ಸಮಾನತೆಯಿಂದ ಬದುಕುವ ಹಕ್ಕು ಇದೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಲು ಪ್ರಮುಖ ಕಾರಣವಾಗಿರುವ ಹೆಣ್ಣುಭ್ರೂಣ ಹತ್ಯೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಾಗಾಗಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಮಾಡಿದಲ್ಲಿ ಕಠಿಣ ಶಿಕ್ಷೆ ಇರುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಹೆಣ್ಣು ಮಗುವಿನ ಜನನದ ಕುರಿತು ಪ್ರಾಮುಖ್ಯತೆ ತಿಳಿಸಲು ಪ್ರತಿ ಗ್ರಾಮಪಂಚಾಯತ್‌ವಾರು ಹೆಣ್ಣು ಮಗು ಜನಿಸಿದಲ್ಲಿ ವಿಶೇಷ ಕಿಟ್ ನೀಡಲು ತೀರ್ಮಾನಿಸಿ, ಡಿಎಂಎಫ್ ಅಡಿ ಅನುದಾನ ನೀಡಲಾಗುವುದು ಎಂದರಲ್ಲದೇ, ಮುಂದಿನ ದಿನಗಳಲ್ಲಿ ಅಭಿಯಾನದಂತೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಅವರು ಮಾತನಾಡಿ, ಸ್ಕಾö್ಯನಿಂಗ್ ಕೈಗೊಳ್ಳುವ ಸೆಂಟರ್‌ಗಳಲ್ಲಿ ವರದಿ ನೀಡುವಾಗ ಗರ್ಭದಲ್ಲಿನ ಮಗುವಿನ ಆರೋಗ್ಯದ ಸ್ಥಿತಿ-ಗತಿ ಕುರಿತು ಪೋಷಕರಿಗೆ ಸತ್ಯತೆಯನ್ನು ಮನವರಿಕೆ ಮಾಡಬೇಕು. ಇತ್ತೀಚೆಗೆ ಜಿಲ್ಲೆಯಲ್ಲಿ ಗರ್ಭದಲ್ಲಿ ಮಗುವಿನ ದೈಹಿಕ ವೈಫಲ್ಯತೆಯಿಂದ ಕೂಡಿರುವುದನ್ನು ಸ್ಕಾö್ಯನಿಂಗ್ ಸೆಂಟರ್‌ನವರು ತಪ್ಪು ಮಾಹಿತಿ ನೀಡಿದ್ದು, ಆ ಮಗುವಿನ ಜನನ ಅತ್ಯಂತ ಕಷ್ಟಕರವಾಗಿದೆ. ಇಂತಹ ವರದಿ ಮರುಕಳಿಸಬಾರದು ಎಂದು ಸಭೆಗೆ ತಿಳಿಸಿದರು. *ಲಿಂಗಾನುಪಾತದಲ್ಲಿ ಏರಿಳಿಕೆ:* ಬಳ್ಳಾರಿ ಜಿಲ್ಲೆಯಲ್ಲಿ ಲಿಂಗಾನುಪಾತ ವಿವರ ಅಂಕಿ ಅಂಶದAತೆ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಲಿಂಗಾನುಪಾತದಲ್ಲಿ ಏರಿಳಿಕೆ ಕಂಡುಬAದಿದೆ. 2014-15 ರಲ್ಲಿ ಒಂದು ಸಾವಿರ ಗಂಡು ಮಗು ಜನನಕ್ಕೆ 945 ಹೆಣ್ಣು ಮಗು ಜನನ ದಾಖಲಾಗಿದೆ. 2015-16 ರಲ್ಲಿ 936, 2016-17 ರಲ್ಲಿ 925, 2017-18 ರಲ್ಲಿ 934, 2018-19 ರಲ್ಲಿ 953, 2019-20 ರಲ್ಲಿ 941, 2020-21ರಲ್ಲಿ 950, 2021-22 ರಲ್ಲಿ 924, 2022-23 ರಲ್ಲಿ 927 ಮತ್ತು 2023-24 ರಲ್ಲಿ 935 ದಾಖಲಾಗುವ ಮೂಲಕ ಲಿಂಗಾನುಪಾತ ಏರಿಳಿಕೆ ಕಂಡಿದೆ. ಲಿAಗಾನುಪಾತ ವೃದ್ಧಿಗೆ ಪಿಸಿ ಅಂಡ್ ಪಿಎನ್‌ಡಿಟಿ ಕಾಯ್ದೆ ಕುರಿತಂತೆ ಐಇಸಿ ಚಟುವಟಿಕೆಗಳು, ಪೋಸ್ಟರ್ ಹಾಗೂ ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಂಡು, ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಡಿಎಚ್‌ಒ ಡಾ.ವೈ.ರಮೇಶ್‌ಬಾಬು ಅವರು ಸಭೆಗೆ ತಿಳಿಸಿದರು. ಪಿಸಿ, ಪಿಎನ್‌ಡಿಟಿ ಕಾಯ್ದೆ ಅಡಿ ಜಿಲ್ಲೆಯಲ್ಲಿ 76 ಸ್ಕಾö್ಯನಿಂಗ್ ಸೆಂಟರ್‌ಗಳು ನೋಂದಾಯಿಸಿಕೊAಡಿದ್ದು, ವಿವಿಧ ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಲಾಗುತ್ತಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ ಅವರು ಸಭೆಗೆ ತಿಳಿಸಿದರು. *ಕೆಪಿಎಂಇ ಅಡಿ ನೋಂದಣಿ ಕಡ್ಡಾಯ:* ಅಲ್ಟಾçಸೌಂಡ್ ಸ್ಕಾö್ಯನಿಂಗ್ ಸೌಲಭ್ಯ ಹೊಂದಿರುವ ಎಲ್ಲಾ ಸೆಂಟರ್‌ಗಳು, ಕ್ಲಿನಿಕ್‌ಗಳು, ಪ್ರಯೋಗಾಲಯಗಳು ಕೆಪಿಎಂಇನಡಿ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದರು. ಕೆ.ಪಿ.ಎಮ್.ಇ ಯಲ್ಲಿ ನೋಂದಣಿ ಮಾಡಿಕೊಳ್ಳದ ಖಾಸಗಿ ವೈದ್ಯಕೀಯ ಸಂಸ್ಥೆಗಳು ಚಿಕಿತ್ಸೆ ನೀಡುವಂತಿಲ್ಲ. ಕಡ್ಡಾಯವಾಗಿ ಅನುಮತಿ ಪಡೆದುಕೊಂಡೇ ಕಾರ್ಯ ನಿರ್ವಹಿಸಬೇಕು, ಈ ಕುರಿತು ಕಾರ್ಯಾಚರಣೆ ನಡೆಸಬೇಕು ಎಂದು ಡಿಹೆಚ್‌ಒ ಅವರಿಗೆ ಸೂಚಿಸಿದರು. ತಜ್ಞ ವೈದ್ಯರ ಸಲಹೆ ಇಲ್ಲದೇ ಮೆಡಿಕಲ್ ಟರ್ಮಿನೇಶನ್ ಆಫ್ ಪ್ರಗನೆನ್ಸಿ (ಎಂಟಿಪಿ)ಗೆ ಸಂಬAಧಿಸಿದ ಔಷಧಗಳನ್ನು ಮಾರಾಟ ಮಾಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವೈದ್ಯಕೀಯ ಕಾರಣಗಳಿಂದಾಗುವ ಗರ್ಭಪಾತ ನಿರ್ವಹಿಸುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳು ಇ-ಕಲ್ಯಾಣಿ ಸಾಫ್ಟ್ವೇರ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದರು. ಜಿಲ್ಲೆಯಲ್ಲಿ ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೇ ವೈದ್ಯ ವೃತ್ತಿ ನಡೆಸುತ್ತಿದ್ದ ಎಂ.ಬಿ.ರಾAಜಾನಿಸಾಬ್, ಶ್ರೀಧರ್ ಹಾಲಹರವಿ ಅವರಿಗೆ ತಲಾ 1 ಲಕ್ಷ ರೂ. ನಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ದಂಡ ವಿಧಿಸಿ, ವೃತ್ತಿ ನಡೆಸದಂತೆ ಖಡಕ್ ಸೂಚನೆ ನೀಡಿದರು. ಸರ್ಕಾರಿ ಆಸ್ಪತ್ರೆಗಳಿಂದ 200 ಮೀ. ಅಂತರದಲ್ಲಿ ಯಾವುದೇ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು ಕಾರ್ಯನಿರ್ವಹಿಸುವಂತಿಲ್ಲ. ಈ ಕುರಿತು ಆದೇಶವಿದ್ದು, ನಗರದ ಬಿಮ್ಸ್ ಆಸ್ಪತ್ರೆಯ ಸುತ್ತ-ಮುತ್ತಲಿನ ಕೆಲ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು ನವೀಕರಣಕ್ಕೆ ಅರ್ಜಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಯವರು ಅರ್ಜಿ ರದ್ದುಗೊಳಿಸಿದರು. ಸಭೆಯಲ್ಲಿ ಹೊಸದಾಗಿ ಸ್ಕಾö್ಯನಿಂಗ್ ಸೆಂಟರ್ ನೋಂದಣಿಗೆ ಬಂದಿರುವ ಅರ್ಜಿಗಳು ಹಾಗೂ ನವೀಕರಣ ಅರ್ಜಿಗಳ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್‌ಬಾಬು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರಕುಮಾರ್, ಜಿಲ್ಲಾ ಆಶ್ರೀತ ರೋಗವಾಹಕಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಪಿಸಿ, ಪಿಎನ್‌ಡಿಟಿ ಸಮಿತಿಯ ಅಧ್ಯಕ್ಷ ರೇಡಿಯಾಲಜಿಸ್ಟ್ ಡಾ.ಶಂಭು.ಎಸ್., ಸದಸ್ಯರಾದ ಮಕ್ಕಳ ತಜ್ಞರಾದ ಡಾ.ಭಾವನಾ.ಡಿ., ಸ್ತಿçÃರೋಗ ತಜ್ಞರಾದ ಡಾ.ಸ್ರವಂತಿ ಪುತ್ತ, ಸೌಖ್ಯ ಬೆಳಕು ಸಂಸ್ಥೆಯ ವ್ಯವಸ್ಥಾಪಕಿ ಲಕ್ಷಿö್ಮÃನರಸಮ್ಮ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು. -------------

ಕುರೇಕುಪ್ಪ: ಮ್ಯಾನುಯಲ್ ಸ್ಕಾö್ಯವೆಂಜರ್ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನುಯಲ್ ಸ್ಕಾö್ಯವೆಂಜರ್ ನೋಂದಣಿ ಪ್ರಕ್ರಿಯೆಯನ್ನು ಕುರೇಕುಪ್ಪ ಪುರಸಭೆಯ ಕಚೇರಿಯಲ್ಲಿ ಅ.28 ರಿಂದ ಅ.30 ರವರೆಗೆ ಹಮ್ಮಿಕೊಂಡಿದ್ದು, ಆಸಕ್ತರು ಸ್ವಯಂ ಪ್ರೇರಿತರಾಗಿ ಅರ್ಜಿ ಸಲ್ಲಿಸಬಹುದು ಎಂದು ಕುರೇಕುಪ್ಪ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ. -------

ಅ.27 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಬಳ್ಳಾರಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಅ.27 ರಂದು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಸಂಬAಧಿಸಿದ 11ಕೆ.ವಿ ಮಾರ್ಗಗಳಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ತಿಳಿಸಿದ್ದಾರೆ. *ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು:* ಎಫ್-1 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹುಲಕುಂದಿ ಗ್ರಾಮ, ಮುಂAಡರಿಗಿ ಕೈಗಾರಿಕಾ ಪ್ರದೇಶ. ಎಫ್-2 ಮಿಂಚೇರಿ ಐ.ಪಿ ಮಾರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್‌ಜೆ ಕೋಟೆ ಕೃಷಿ ಪ್ರದೇಶಗಳು. ಎಫ್-4, ಸುಧಾಕರ ಪೈಪ್ ಮಾರ್ಗದ 2ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ. ಎಫ್-5 ಅಪೇರಲ್ ಪಾರ್ಕ್ ಮಾರ್ಗದ 3ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ. ಎಫ್-6 ಗುರುನಾಥ ರೈಸ್‌ಮಿಲ್ ಮಾರ್ಗದ 4ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಅ.29 ರಂದು 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಅ.29 ರಂದು 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ನಗರದ ಕೋಟೆ ಪ್ರದೇಶದ ಹಳೆ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷÀÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆಯುಷ್ ಇಲಾಖೆಯ ಆಯುಕ್ತರಾದ ಶ್ರೀನಿವಾಸುಲು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್.ಸರಳಾದೇವಿ ಸೇರಿದಂತೆ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. --------

ಬೀಬೀ ರಜಾ ಖಾನಂಗೆ ಪಿಎಚ್.ಡಿ ಪದವಿ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತç ವಿಭಾಗದ ಪೂರ್ಣಕಾಲಿಕ ಪಿಎಚ್.ಡಿ ವಿದ್ಯಾರ್ಥಿಯಾಗಿದ್ದ ಬೀಬೀ ರಜಾ ಖಾನಂ ಅವರು ಮಂಡಿಸಿದ “ಸಿಂಥೆಸಿಸ್, ಕ್ಯಾರಕ್ಟರೈಜೆಷನ್ ಅಂಡ್ ಫಿಸಿಕೊಕೆಮಿಕಲ್ ಸ್ಟಡಿ ಆಫ್ ಮೆಟಲ್ ಅಂಡ್ ಮೆಟಲ್ ಆಕ್ಸೆöÊಡ್ ಬೇಸ್ಡ್ ನ್ಯಾನೊಪಾರ್ಟಿಕಲ್ಸ್” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಭೌತಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಖಡ್ಕೆ ಉದಯಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು. -------

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ. ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಒಟ್ಟು 469 ವಿದ್ಯಾರ್ಥಿಗಳಿದ್ದು, ಎನ್‌ಸಿಆರ್‌ಟಿ ಪಠ್ಯಕ್ರಮ ಹೊಂದಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾರ ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾರ ಮೊ:9740738762 ಗೆ ಸಂಪರ್ಕಿಸಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಸಮಾಜ ಕಲ್ಯಾಣ ಇಲಾಖೆ; ವಸತಿ ನಿಲಯ ಕಟ್ಟಡ ಬಾಡಿಗೆಗೆ ಬೇಕಾಗಿದೆ

ಬಳ್ಳಾರಿ,ಅ.25(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಬಳ್ಳಾರಿ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ನಂ-6 ನಿಲಯದಲ್ಲಿ ಮಂಜೂರಾತಿ ಸಂಖ್ಯೆಗಿAತ ದಾಖಲಾತಿ ಸಂಖ್ಯೆ ಹೆಚ್ಚಾಗಿರುವ ಪ್ರಯುಕ್ತ ವಿದ್ಯಾರ್ಥಿನಿಲಯದಲ್ಲಿನ 200 ಮಕ್ಕಳ ವಾಸಕ್ಕೆ ಅನುಕೂಲಕರವಾಗಿರುವ ಕಟ್ಟಡವಿದ್ದಲ್ಲಿ ಬಾಡಿಗೆ ನೀಡಲು ಆಸಕ್ತ ಮಾಲೀಕರು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಮತಾ.ಪಿ ಅವರು ತಿಳಿಸಿದಾರೆ. ಆಸಕ್ತ ಕಟ್ಟಡ ಮಾಲೀಕರು ಕಟ್ಟಡದ ಸೂಕ್ತ ದಾಖಲಾತಿಗಳೊಂದಿಗೆ ನವೆಂಬರ್ 11 ರೊಳಗಾಗಿ ಕೌಲ್ ಬಜಾರ್‌ನ 1 ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನÀದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1, ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9480843073 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಗುರುವಾರ, ಅಕ್ಟೋಬರ್ 24, 2024

ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಡಾ.ದಿವ್ಯಾ ಎಸ್.ಅಯ್ಯರ್ ನೇಮಕ

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಡಾ.ದಿವ್ಯಾ ಎಸ್ ಅಯ್ಯರ್ ಅವರನ್ನು ಭಾರತೀಯ ಚುನಾವಣಾ ಆಯೋಗವು ನೇಮಿಸಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣೆಗೆ ಕೈಗೊಂಡಿರುವ ವ್ಯವಸ್ಥೆ ಮತ್ತು ನೀತಿ ಸಂಹಿತೆ ಉಲ್ಲಂಘನೆಗಳನ್ನು ಪರಿಶೀಲಿಸಲು ಡಾ.ದಿವ್ಯಾ ಎಸ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಐಎಎಸ್ ಅಧಿಕಾರಿ ಡಾ.ದಿವ್ಯಾ ಎಸ್ ಅಯ್ಯರ್ ಅವರು ಸಂಡೂರಿನ ಹೊಸಪೇಟೆ ರಸ್ತೆಯ ಸರ್ಕ್ಯೂಟ್ ಹೌಸ್‌ನ ಕೊಠಡಿ ಸಂಖ್ಯೆ 1 ರಲ್ಲಿ ವಾಸ್ತವ್ಯ ಮಾಡುವರು. ಸಾರ್ವಜನಿಕರು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷದ ಸದಸ್ಯರು ಯಾವುದೇ ಚುನಾವಣೆಗೆ ಸಂಬAಧಿಸಿದ ದೂರುಗಳಿದ್ದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 4 ರಿಂದ 5 ರವರೆಗೆ ನಿಗದಿತ ಸ್ಥಳ ಮತ್ತು ಸಮಯದಲ್ಲಿ ಸಾಮಾನ್ಯ ವೀಕ್ಷಕರನ್ನು ಭೇಟಿ ಮಾಡಬಹುದು ಅಥವಾ ಅವರ ಮೊ.9141142756 ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಎಚ್.ಡಿ ಅವರು ತಿಳಿಸಿದ್ದಾರೆ. ------------

ಮ್ಯಾನ್ಯುಯಲ್ ಸ್ಕಾö್ಯವೆಂರ‍್ಸ್ಗಳ ಸಮೀಕ್ಷೆ; ಶಿಬಿರದಲ್ಲಿ ಪಾಲ್ಗೊಂಡು ನೋಂದಾಯಿಸಿಕೊಳ್ಳಲು ಸೂಚನೆ

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕಾö್ಯವೆಂಜಿAಗ್ ಕಾರ್ಯದಲ್ಲಿ ದೈಹಿಕವಾಗಿ ತೊಡಗಿಸಿಕೊಂಡವರಿದ್ದಲ್ಲಿ ಕಂಪ್ಲಿಯ ವಿವಿಧ ವಾರ್ಡ್ಗಳಲ್ಲಿ ವಿವಿಧ ದಿನಗಳಂದು ಏರ್ಪಡಿಸಲಾಗುವ ಶಿಬಿರದಲ್ಲಿ ಭಾಗವಹಿಸಿ ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ. ಅ.25 ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ಕಂಪ್ಲಿ ಪಟ್ಟಣದ 22ನೇ ವಾರ್ಡ್ ಎಂ.ಡಿ ಕ್ಯಾಂಪ್, ಅ.28 ರಂದು ಗಾಂಧಿನಗರದ 9ನೇ ವಾರ್ಡ್ ಹಾಗೂ 4ನೇ ವಾರ್ಡ್ ಅಂಬೇಡ್ಕರ್ ನಗರ. *ಬೇಕಾದ ದಾಖಲೆ:* ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಒಂದು ಭಾವಚಿತ್ರ (ಅಳತೆ 6*4), ಬ್ಯಾಂಕ್ ಖಾತೆಯ ಪಾಸ್‌ಬುಕ್‌ನ ಮುಖಪುಟದ ಪ್ರತಿ (ಮೂಲ ಪುಸ್ತಕವನ್ನು ಸಹ ತರಬೇಕು). ಆಧಾರ್ ಪ್ರತಿ (ಮೂಲ ಪ್ರತಿ ಸಹ ತರಬೇಕು), ಮ್ಯಾನ್ಯುಯಲ್ ಸ್ಕಾö್ಯವೆಂಜಿಗ್ ಕಾರ್ಯನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರ ಸಲ್ಲಿಸಬೇಕು. ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲ ಸ್ವಚ್ಛಗೊಳಿಸುವುದು, ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವುದು, ಈ ಕಾರ್ಯಗಳಲ್ಲಿ ತೊಡಗಿರುವವರು ಯಾವುದೇ ವ್ಯಕ್ತಿಗಳಿದ್ದಲ್ಲಿ ಮೇಲ್ಕಂಡ ದಿನದಂದು ನಡೆಯುವ ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ನೋಂದಾಯಿಸಿಕೊಳ್ಳದೇ ಇದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕಂಪ್ಲಿ ಪುರಸಭೆ ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶ್‌ಬಾಬು-ಮೊ.8618955207, ಕಿರಿಯ ಅಭಿಯಂತರರಾದ ಮೇಘನಾ-ಮೊ.9902377287, ಕಿರಿಯ ಆರೋಗ್ಯ ನಿರೀಕ್ಷಕರಾದ ಜೀವನ್ ಸ್ವಾತಿ-ಮೊ.8792587545, ಮೌನೇಶ್ವರ-ಮೊ.8105233201 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ವಕ್ಫ್ ಬೋರ್ಡ್: ಚಂದಾದಾರಿಕೆ ಶುಲ್ಕ ಪಾವತಿಸಲು ಸೂಚನೆ

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ನಗರದ ಬ್ರೂಸ್‌ಪೇಟೆ ವಕ್ಫ್ ಸಂಸ್ಥೆ ಈದ್ಗಾ(ಸುನ್ನಿ)ಯ ಸಾಮಾನ್ಯ ಸದಸ್ಯರ ದಾಖಲಾತಿ ನೋಂದಣಿಗೆ ದಾಖಾಲಾತಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, 2019 ರಲ್ಲಿ ಅರ್ಜಿ ಸಲ್ಲಿಸಿದ ಅರ್ಭ್ಯಥಿಗಳು ಚಂದಾದಾರಿಕೆ ಶುಲ್ಕ ಕಡ್ಡಾಯವಾಗಿ ಪಾವತಿಸಬೇಕು ಎಂದು ಈದ್ಗಾ(ಸುನ್ನಿ)ಯ ನೋಂದಣಾಧಿಕಾರಿ ಅಧಿಕಾರಿ ಅವರು ತಿಳಿಸಿದ್ದಾರೆ. ಅರ್ಭ್ಯಥಿಗಳು 200 ರೂ. ಕಡ್ಡಾಯವಾಗಿ ನವೆಂಬರ್ 08ರೊಳಗೆ ಕಚೇರಿಯ ಸಮಯದಲ್ಲಿ ಪಾವತಿಸಬೇಕು. ತಪ್ಪಿದಲ್ಲಿ ಅಂತಹ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಮತ್ತು ಮತ ಚಲಾಯಿಸಲು ಸಂಸ್ಥೆಯ ಬೈಲಾ, ವಕ್ಫ್ ಕಾಯ್ದೆ 1995 ಮತ್ತು ವಕ್ಫ್ ನಿಯಮಗಳು 2017 ರ ಪ್ರಕಾರ ಅನರ್ಹರಾಗಿರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಸಂಡೂರು ವಿಧಾನಸಭೆ ಉಪಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ; 8 ಪ್ರಕರಣ ದಾಖಲು

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 2616.93 ಲೀಟರ್ (ರೂ.7,76,648 ಮೌಲ್ಯ) ಮದ್ಯ ವಶಪಡಿಸಿಕೊಂಡು 8 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 2615.49 ಲೀಟರ್ (ರೂ.776008 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 1.41 ಲೀಟರ್ (ರೂ.640 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 9 ಫ್ಲೆöÊಯಿಂಗ್ ಸÁ್ಕö್ಯ÷್ವಡ್, 1 ಎಸ್‌ಎಸ್‌ಟಿ ತಂಡ ಮತ್ತು 4 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. -----------

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ಮಧ್ಯವರ್ತಿಗಳಿಂದ ಜಾಗೃತರಾಗಿರಿ

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ಜಿಲ್ಲೆಯ ಬಳ್ಳಾರಿ (ನಗರ), ಬಳ್ಳಾರಿ (ಗ್ರಾಮಾಂತರ), ಸಂಡೂರು, ಸಿರುಗುಪ್ಪ (ಕಂಪ್ಪಿ) ಯೋಜನೆಗಳಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿ ಮೆರಿಟ್ ಆಧಾರದ ಮೇಲೆ ಆನ್‌ಲೈನ್ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ. ಮಧ್ಯವರ್ತಿಗಳಿಂದ ಜಾಗೃತರಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ನೇಮಕಾತಿಗಾಗಿ ಗ್ರಾಮ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಮಧ್ಯವರ್ತಿಗಳು ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಕೊಡಿಸುವುದಾಗಿ ಹಣ ಕೇಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಿದಲ್ಲಿ ತಾವೇ ನೇರ ಜವಾಬ್ದಾರರಾಗಿರುತ್ತೀರಿ ಎಂದು ಅವರು ತಿಳಿಸಿದ್ದಾರೆ. ಮಧ್ಯವರ್ತಿಗಳು ಹಣವನ್ನು ಕೇಳಿದಲ್ಲಿ ಅಂತಹವರ ವಿರುದ್ಧ ಪೋಲಿಸ್ ಇಲಾಖೆಯಲ್ಲಿ ಎಫ್‌ಐಆರ್ ದಾಖಲಾಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಬುಧವಾರ, ಅಕ್ಟೋಬರ್ 23, 2024

ಬಳ್ಳಾರಿ; ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ಉಪ ಚುನಾವಣಾ ವೇಳಾಪಟ್ಟಿ ಪ್ರಕಟ

ಬಳ್ಳಾರಿ,ಅ.23(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ. ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 ರಂದು ನಡೆಯಲಿದೆ. ಮಾದರಿ ನೀತಿ ಸಂಹಿತೆಯು ನ.06 ರಿಂದ ನ.26 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಕ್ಕೆ ಮಾತ್ರ ಜಾರಿ ಇರುತ್ತದೆ. ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಯಾ ತಾಲ್ಲೂಕು ತಹಶೀಲ್ದಾರರ ಉಸ್ತುವಾರಿಯಲ್ಲಿ ತಾಲ್ಲೂಕು ಮಟ್ಟದ ಎಂಸಿಸಿ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ. *ಖಾಲಿ ಇರುವ ಗ್ರಾಪಂ ವಿವರ ಮತ್ತು ಸ್ಥಾನ:* ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು-1, ರ‍್ರಗುಡಿ-1, ಬಿ.ಬೆಳಗಲ್ಲು-1, ಕುರುಗೋಡು ತಾಲ್ಲೂಕಿನ ಕಲ್ಲುಕಂಭ-2, ದಮ್ಮೂರು-1, ಸಿರುಗುಪ್ಪ ತಾಲ್ಲೂಕಿನ ಬಿ.ಎಂ.ಸೂಗೂರು-2, ತಾಳೂರು-1, ಕೆಂಚನಗುಡ್ಡ-1, ಕೆ.ಸೂಗೂರು-1, ಕಂಪ್ಲಿ ತಾಲ್ಲೂಕಿನ ಸಣಾಪುರ-1, ಎಮ್ಮಿಗನೂರು-1, ದೇವಲಾಪುರ-1, ಮೆಟ್ರಿ-1 ಸೇರಿ ಒಟ್ಟು 15 ಗ್ರಾಮಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ. ---------

ಕಿತ್ತೂರು ರಾಣಿ ಚೆನ್ನಮ್ಮ ಸ್ಪೂರ್ತಿಧಾಯಕ ಮಹಿಳೆ: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಅ.23(ಕರ್ನಾಟಕ ವಾರ್ತೆ): ಬ್ರಿಟಿಷರ ವಿರುದ್ಧ ಹೋರಾಡಿದ ಕೆಚ್ಚೆದೆಯ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಸ್ಪೂರ್ತಿಧಾಯಕ ಮಹಿಳೆಯಾಗಿದ್ದು, ಅನೇಕ ವೀರ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ ಎಂದು ಮಹಾನಗರ ಪಾಲಿಕೆಯ ಮೇಯರ್ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಬುಧವಾರ ಆಯೋಜಿಸಿದ್ದ ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೇಷ್ಠ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರು ತಮ್ಮ ಏಳನೇ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ಲು ವರಸೆ, ಕತ್ತಿ ವರಸೆಯಲ್ಲಿ ನಿಪುಣೆ ಹೊಂದಿದ್ದವರು. ಚಿಕ್ಕಂದಿನಿAದಲೇ ವೀರತ್ವವನ್ನು ಮೈಗೂಡಿಸಿಕೊಂಡಿದ್ದವರು. ಚೆನ್ನಮ್ಮ ಅವರ ಧೈರ್ಯ, ಶೌರ್ಯವೂ ವಿಶ್ವಕ್ಕೆ ಮಾದರಿಯಾಗಿದೆ. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸೋಣ ಎಂದು ಕರೆ ನೀಡಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ ಸಿದ್ಧಲಿಂಗಪ್ಪ ಅವರು ವಿಶೇಷ ಉಪನ್ಯಾಸ ಮಾತನಾಡಿ, ಕಿತ್ತೂರು ಸಂಸ್ಥಾನವು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರö್ಯದ ಕಹಳೆ ಮೊಳಗಿಸಿದ್ದು, ಇಲ್ಲಿನ ಮಣ್ಣು ವೀರಾ ಸೇನಾನಿಗಳ ರಕ್ತದಿಂದ ಪಾವಿತ್ರö್ಯತೆಗೊಂಡಿದೆ ಎಂದರು. ಕಿತ್ತೂರು ರಾಣಿ ಚೆನ್ನಮ್ಮ ಅವರು 1778 ರ ಸೆಪ್ಟಂಬರ್ 14 ರಲ್ಲಿ ಜನಿಸಿದ್ದಾರೆ. 1824 ರ ಅಕ್ಡೋಬರ್ 23 ರಂದು ಬ್ರಿಟಿಷರ ವಿರುದ್ಧ ಹೋರಾಡಿ ವೈರಿಗಳನ್ನು ಮೆಟ್ಟಿನಿಂತು ವಿಜಯೋತ್ಸವ ಮೆರೆದ ಸಂಭ್ರಮದ ಕ್ಷಣವೇ ಈ ದಿನ ವೀರೋತ್ಸವದ ಸುದಿನವಾಗಿದೆ ಎಂದು ತಿಳಿಸಿದರು. ಇತಿಹಾಸದ ಧೃವತಾರೆ ಕಿತ್ತೂರು ರಾಣಿ ಚೆನ್ನಮ್ಮ ಅವರು ತನ್ನ ಸಾಮ್ರಾಜ್ಯದ ರಕ್ಷಣೆಗಾಗಿ ಸಮರ್ಪಣಾ ಮನೋಭಾವ ಹೊಂದಿದ್ದರು. ಅವರ ದೇಶಪ್ರೇಮ, ಆತ್ಮವಿಶ್ವಾಸ ಕುರಿತು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕು ಎಂದು ವಿವರಿಸುತ್ತಾ, ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಸ್ವಾರಸ್ಯವನ್ನು ವಿವರಿಸಿದರು. ಇದೇ ವೇಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಗಣ್ಯರೆಲ್ಲರೂ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಂಪ್ಲಿಯ ಶೈಲಾ ದೇವರಮನೆ ಅವರು ದೇಶಭಕ್ತಿ ಗೀತೆಗಳು ಪ್ರಸ್ತುತ ಪಡಿಸಿದರು. ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದೊಂದಿಗೆ ವಿವಿಧ ಕಲಾ ವಾದ್ಯಗಳ ಮೂಲಕ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭಗೊAಡು ಬಸವೇಶ್ವರ ಪುತ್ಥಳಿ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರಲ್ಲಿನ ವೇದಿಕೆ ಕಾರ್ಯಕ್ರಮದವರೆಗೆ ತಲುಪಿ ಸಂಪನ್ನಗೊAಡಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿ.ನಾಗರಾಜ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಜಿ.ನೀಲಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಿ.ಕೊಟ್ರಪ್ಪ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಎನ್.ಎಂ ರಾಜೇಶ್ವರಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಸಿಂಧೂರು.ಎA., ಪಾಲಿಕೆಯ ಸದಸ್ಯರಾದ ಸುರೇಖಾ ಮಲ್ಲನಗೌಡ, ಈರಮ್ಮ ಸುರೇಂದ್ರ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥತಿತರಿದ್ದರು. ---------