ಸೋಮವಾರ, ಅಕ್ಟೋಬರ್ 28, 2024

ನ.01 ರಂದು 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಬಳಿಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಸಂದೇಶ ನೀಡುವರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕರ್ನಾಟಕ ರಾಜ್ಯೋತ್ಸವ ಅಚರಣಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ