ಮಂಗಳವಾರ, ಅಕ್ಟೋಬರ್ 1, 2024

ಅ.02 ರಂದು ಮಹಾತ್ಮ ಗಾಂಧೀಜಿಯವರ 155 ನೇ ಜಯಂತ್ಸೋತ್ಸವ ಕಾರ್ಯಕ್ರಮ

ಬಳ್ಳಾರಿ,ಅ.01(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ 155 ನೇ ಜಯಂತ್ಸೋತ್ಸವ (ಗಾಂಧಿ ಭಜನೆ ಹಾಗೂ ಸರ್ವಧರ್ಮ ಪ್ರಾರ್ಥನೆ) ಕಾರ್ಯಕ್ರಮವನ್ನು ಅ.02 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ರೈಲು ನಿಲ್ದಾಣ ಎದುರಗಡೆಯ ಜಿಲ್ಲಾಧಿಕಾರಿಗಳ ಕಚೇರಿ ಅವರಣದ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬಳ್ಳಾರಿ ತಾಲ್ಲೂಕಿನ ಇಬ್ರಾಹಿಂಪುರದ ಎಸ್.ಎಂ.ಹುಲುಗಪ್ಪ ಮತ್ತು ತಂಡದಿAದ ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಗಾಂಧೀಜಿ ಕುರಿತು ಭಜನಾ ಕಾರ್ಯಕ್ರಮ ನಡೆಸಿಕೊಡುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಸೇರಿದಂತೆ ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು ಹಾಗೂ ಎಲ್ಲಾ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ