ಮಂಗಳವಾರ, ಅಕ್ಟೋಬರ್ 1, 2024

ಅ.02 ರಿಂದ “ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನ

ಬಳ್ಳಾರಿ,ಅ.01(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ 2025-26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಅಕ್ಟೋಬರ್ 02 ರಿಂದ “ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025-26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನವನ್ನು ಅ.02 ರಿಂದ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತರಿ. ಗಂಡು ಹೆಣ್ಣಿಗೆ ಸಮಾನ ಕೂಲಿ ಪ್ರತಿ ದಿನಕ್ಕೆ ರೂ.349 ನೀಡಲಾಗುವುದು. ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರುಗಳಿಗೆ ನಿರ್ವಹಿಸುವ ಕೆಲಸಕ್ಕೆ ಅಥವಾ ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ.10 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಇದೆ. *ಗ್ರಾಮ ಪಂಚಾಯತಿಯಿAದ ತೆಗೆದುಕೊಳ್ಳಬಹುದಾದ ವೈಯಕ್ತಿಕ ಕಾಮಗಾರಿಗಳು:* ದನದ ಕೊಟ್ಟಿಗೆ, ಕುರಿ ಕೊಟ್ಟಿಗೆ, ಕೋಳಿ ಶೆಡ್, ಎರೆಹುಳ ತೊಟ್ಟಿ, ಸೋಕ್ ಪಿಟ್, ಕೃಷಿ ಹೊಂಡ, ಬದು ನಿರ್ಮಾಣ, ವೈಯಕ್ತಿಕ ಕೊಳವೆ ಬಾವಿ ಮರುಪೂರಣ ಘಟಕ, ಅಜೋಲಾ ಘಟಕ, ಮೀನು ಕೃಷಿ ಕೊಳ. *ತೋಟಗಾರಿಕೆ ಇಲಾಖೆಯಿಂದ ತೆಗೆದುಕೊಳ್ಳಬಹುದಾದ ವೈಯಕ್ತಿಕ ಬಹು ವಾರ್ಷಿಕ ಬೆಳೆಗಳು:* ದಾಳಿಂಬೆ, ತೆಂಗು, ಮಾವು/ಸಪೋಟ, ಸೀಬೆ, ನುಗ್ಗೆ, ಅಂಜೂರ, ಕರಿಬೇವು, ಗುಲಾಬಿ, ಮಲ್ಲಿಗೆ, ಹಿಪ್ಪುನೇರಳೆ ಹಾಗೂ ವೈಯಕ್ತಿಕ ಪೌಷ್ಠಿಕ ಕೈ ತೋಟ. ಈ ಎಲ್ಲಾ ವೈಯಕ್ತಿಕ ಕಾಮಗಾರಿಗಳಿಗೆ ಒಂದು ಕುಟುಂಬಕ್ಕೆ ಜೀವಿತಾವಧಿವರೆಗೆ ರೂ.5 ಲಕ್ಷ ಮೀರದಂತೆ ಕಾಮಗಾರಿ ಬೇಡಿಕೆಯನ್ನು ಗ್ರಾಮ ಪಂಚಾಯತಿ ಕಚೇರಿಗೆ ಸಲ್ಲಿಸಬಹುದು. ನಿಮ್ಮ ಗ್ರಾಮಗಳಲ್ಲಿ ನಡೆಯುವ ವಾರ್ಡ್ ಸಭೆ ಮತ್ತು ಗ್ರಾಮಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ಯೋಜನೆಯಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಬಹುದು ಹಾಗೂ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ