ಬಳ್ಳಾರಿ,ಅ.03(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ಮೂಡಿಸಲು ಅ.05 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ‘ವಿಧಾನ್ ಸೇ ಸಮಾಧಾನ್’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ತಿಳಿಸಿದ್ದಾರೆ.
----------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ