ಗುರುವಾರ, ಅಕ್ಟೋಬರ್ 3, 2024

ಅ.06 ರಂದು ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆಯ್ಕೆಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ; ಪ್ರವೇಶ ಪತ್ರ ಪಡೆಯಲು ಸೂಚನೆ

ಬಳ್ಳಾರಿ,ಅ.03(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆಯ್ಕೆಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯು ಅ.06 ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಪ್ರ‍್ರವೇಶ ಪತ್ರವನ್ನು (ಹಾಲ್‌ಟಿಕೇಟ್) ಡೌನ್‌ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಹೊಸಪೇಟೆ ರಸ್ತೆಯ ಬಿಐಟಿಎಂ ಕಾಲೇಜು ಬಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುವುದು ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಬಳಿಯ ಮೌಲಾನ ಅಜಾದ ಭವನದಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ:08392-200125/224, ಇಲಾಖಾ ಸಹಾಯವಾಣಿ 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ವಿಠೋಬ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ