ಸೋಮವಾರ, ಅಕ್ಟೋಬರ್ 14, 2024

ಅ.17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಬಳ್ಳಾರಿ,ಅ.14(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅ.17 ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ನಲ್ಲಚೆರವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ವಾಲ್ಮೀಕಿ ಭವನದ ಆವರಣದಲ್ಲಿನ ವಾಲ್ಮೀಕಿ ಪುತ್ಥಳಿಗೆ ಪೂಜೆ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಶಾಸಕರಾದ ಡಾ.ಸೈಯದ್ ನಾಸೀರ್ ಹುಸೇನ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಬಳ್ಳಾರಿಯ ಮಹರ್ಷಿ ವಾಲ್ಮೀಕಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ರಾಮ್ ಪ್ರಸಾದ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಲಬುರಗಿಯ ಕವಿತ್ರಿ, ಲೇಖಕಿ ಹಾಗೂ ಕನ್ಯಾ ಪ್ರೌಢಶಾಲೆ ನೂತನ ವಿದ್ಯಾಲಯದ ಸಹ ಶಿಕ್ಷಕರಾದ ಲಕ್ಷಿö್ಮÃದೇವಿ.ಎಸ್ ರತ್ನಗಿರಿ ಅವರು ಜಯಂತಿ ಕುರಿತು ಉಪನ್ಯಾಸ ನೀಡುವರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ವಾಲ್ಮೀಕಿ ವೃತ್ತ(ಎಸ್‌ಪಿ ಸರ್ಕಲ್)ದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ಪಿ.ಪ್ರಮೋದ್ ಕುಮಾರ್, ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್.ಕೆ ಶಂಕಿನದಾಸರ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹೆಚ್.ಮಲ್ಲಿಕಾರ್ಜುನ ಸೇರಿದಂತೆ ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡು ಹಾಗೂ ಎಲ್ಲಾ ಸಾರ್ವಜನಿಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ