ಬುಧವಾರ, ಅಕ್ಟೋಬರ್ 16, 2024

ಅ.17 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಬಳ್ಳಾರಿ,ಅ.16(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅ.17 ಬೆಳಿಗ್ಗೆ 09 ಗಂಟೆಗೆ ನಗರದ ನಲ್ಲಚೆರುವು ಪ್ರದೇಶದ ವಾಲ್ಮೀಕಿ ಮಹರ್ಷಿಯವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಬೆಳಿಗ್ಗೆ 10.30 ಗಂಟೆಗೆ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಹಾಜರಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ