ಶನಿವಾರ, ಅಕ್ಟೋಬರ್ 19, 2024

ಅ.19 ರಂದು ತಿಂಗಳ ಸೊಬಗು ಕಾರ್ಯಕ್ರಮ

ಬಳ್ಳಾರಿ,ಅ.19(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಂಸ್ಕೃತಿಕ ಸಮುಚ್ಛಯ ನಿರ್ವಹಣಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಮಟ್ಟದ ಕಲಾ ಪ್ರತಿಬೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆ ಶನಿವಾರದಂದು ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಅ.19 ರಂದು ಸಂಜೆ 6.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗAದಿರದಲ್ಲಿ ಏರ್ಪಡಿಸಲಾಗಿದೆ. ನಗರದ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಬಾಲಮಂದಿರ ವತಿಯಿಂದ ಜಾನಪದ ನೃತ್ಯ, ಬಳ್ಳಾರಿ ತಾಲ್ಲೂಕಿನ ಸಿಂಧುವಾಳ ಗ್ರಾಮದ ಪರಮೇಶ್.ಕೆ ಅವರು ಕೋಲಾಟ ಕಾರ್ಯಕ್ರಮ, ಸಿರುಗುಪ್ಪದ ವೀರೇಶ್ ದಳವಾಯಿ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿವೆ. ನಗರದ ಕಲಾಭಿಮಾನಿಗಳು ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮನರಂಜನೆ ಪಡೆದುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಕೋರಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ