ಶುಕ್ರವಾರ, ಅಕ್ಟೋಬರ್ 18, 2024
ಅ.19 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಕುರುಗೋಡು ಜೆಸ್ಕಾಂ ಕಾರ್ಯ ಮತ್ತು ಪಾಲನಾ ಎಮ್ಮಿಗನೂರು ಶಾಖೆ ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅ.19 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01:30 ರವರೆಗೆ ಹೆಚ್.ವೀರಾಪುರ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದ್ದು, ವಿದ್ಯುತ್ ಕುಂದುಕೊರತೆಗಳಿರುವ ಗ್ರಾಹಕರು ಭಾಗವಹಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಂದ್ರಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ