ಶುಕ್ರವಾರ, ಅಕ್ಟೋಬರ್ 18, 2024

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ಅ.20 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಅ.18(ಕರ್ನಾಟಕ ವಾರ್ತೆ): ಬಳ್ಳಾರಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದÀ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಅ.20 ರಂದು ಬೆಳಿಗ್ಗೆ 9.30 ಗಂಟೆಯಿAದ ಮಧ್ಯಾಹ್ನ 03.30 ಗಂಟೆಯವರೆಗೆ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-43 ಸಿದ್ದಾಪುರ ರಸ್ತೆ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶ. ಎಫ್-30 ಗುಗ್ಗರಹಟ್ಟಿ ಕೈಗಾರಿಕಾ ಮಾರ್ಗ ಗುಗ್ಗರಹಟ್ಟಿ ಗ್ರಾಮ, ಮುಂಡರಗಿ, ಬೈಪಾಸ್ ರಸ್ತೆ. ಎಫ್-27 ಆಂಧ್ರಾಳ್ ಮಾರ್ಗದ ಅಂದ್ರಾಳ್, ಪಾತ್ರ ಬೂದಿಹಾಳ್, ಮಂಗಮ್ಮ ಕ್ಯಾಂಪ್ ಗ್ರಾಮಗಳು. ಎಫ್-29 ಮಿಂಚೇರಿ ಎನ್.ಜೆ.ವೈ ಮಾರ್ಗದ ಮಿಂಚೇರಿ ಗ್ರಾಮ, ಎಸ್.ಜೆ ಕೋಟೆ ಗ್ರಾಮ, ಮುಂಡರಿಗಿ ಗ್ರಾಮ, ಚರಕುಂಟೆ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ