ಶುಕ್ರವಾರ, ಅಕ್ಟೋಬರ್ 18, 2024
ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಅ.21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ.ರವಿ ಕುಮಾರ್, ನವೀನ್ ಕುಮಾರ್.ಎನ್ ಸೇರಿದಂತೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ