ಶುಕ್ರವಾರ, ಅಕ್ಟೋಬರ್ 25, 2024
ಅ.27 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಅ.25(ಕರ್ನಾಟಕ ವಾರ್ತೆ):
ಬಳ್ಳಾರಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಅ.27 ರಂದು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಸಂಬAಧಿಸಿದ 11ಕೆ.ವಿ ಮಾರ್ಗಗಳಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೋಹನಬಾಬು ತಿಳಿಸಿದ್ದಾರೆ.
*ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು:*
ಎಫ್-1 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹುಲಕುಂದಿ ಗ್ರಾಮ, ಮುಂAಡರಿಗಿ ಕೈಗಾರಿಕಾ ಪ್ರದೇಶ. ಎಫ್-2 ಮಿಂಚೇರಿ ಐ.ಪಿ ಮಾರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್‌ಜೆ ಕೋಟೆ ಕೃಷಿ ಪ್ರದೇಶಗಳು.
ಎಫ್-4, ಸುಧಾಕರ ಪೈಪ್ ಮಾರ್ಗದ 2ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ. ಎಫ್-5 ಅಪೇರಲ್ ಪಾರ್ಕ್ ಮಾರ್ಗದ 3ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ. ಎಫ್-6 ಗುರುನಾಥ ರೈಸ್‌ಮಿಲ್ ಮಾರ್ಗದ 4ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ