ಮಂಗಳವಾರ, ಅಕ್ಟೋಬರ್ 29, 2024

ಬಳ್ಳಾರಿಯಲ್ಲಿ 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವವಿದೆ: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಅ.29(ಕರ್ನಾಟಕ ವಾರ್ತೆ): ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವ ಇದ್ದು, ಅದನ್ನು ಬಲಪಡಿಸುವತ್ತ ಗಮನಹರಿಸಬೇಕು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಎಂದು ಹೇಳಿದರು. ನಗರದ ಜಿಪಂ ನ ಹಳೆಯ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ 9ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದವು ಪುರಾತನ ಕಾಲದಿಂದಲೂ ಮಹತ್ವ ಪಡೆದುಕೊಂಡಿದೆ. ಪರಿಸರದಲ್ಲಿ ದೊರೆಯುವ ಗಿಡಮೂಲಿಕೆಗಳಿಂದ ತಯಾರಾದ ಔಷಧಿಗಳು ಜನಸಾಮಾನ್ಯರ ಉತ್ತಮ ಆರೋಗ್ಯಕ್ಕೆ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. ಪೂರ್ವಜರು ದವಾಖಾನೆಗಳಿಗಿಂತ ಹೆಚ್ಚಾಗಿ ಆಯುರ್ವೇದ ಔಷಧಿಗಳ ತಯಾರಿಸಿಕೊಂಡು ಸುಸ್ಥಿರ ಆರೋಗ್ಯ ಹೊಂದಿದ್ದರು. ಪ್ರಸ್ತುತ ದಿನಮಾನಗಳಲ್ಲಿ ಜಾಗತಿಕವಾಗಿ ಉತ್ತಮ ಆರೋಗ್ಯ ಹೊಂದಲು ಆಯುರ್ವೇದದ ನಾವೀನ್ಯತೆ ಹಾಗೂ ಆಯುರ್ವೇದದ ಆವಿಷ್ಕಾರವಾಗಬೇಕು ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್.ಸರಳಾದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಯುರ್ವೇದವು ವಿಶ್ವ ಆರೋಗ್ಯ ಸಂಸ್ಥೆಯಿAದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ಮಾನ್ಯತೆ ಪಡೆದಿದೆ. ಕೇಂದ್ರ ಆಯುಷ್ ಸಚಿವಾಲಯವು ಧನ್ವಂತರಿ ಜಯಂತಿಯನ್ನು 2016 ರ ಅಕ್ಟೋಬರ್ 29 ರಂದು ರಾಷ್ಟಿçÃಯ ಆಯುರ್ವೇದ ದಿನವನ್ನಾಗಿ ಘೋಷಿಸಿದೆ ಎಂದು ತಿಳಿಸಿದರು. ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಆಯುರ್ವೇದ ಮಹತ್ವ ತಿಳಿಸಲು ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಸಪ್ತಾಹ ಕಾರ್ಯಕ್ರಮದಡಿ ಕಳೆದ ಏಳು ದಿನಗಳಿಂದ ನಾನಾ ಸ್ಥಳಗಳಲ್ಲಿ ವಿವಿಧ ಸಂಘ ಸಂಸ್ಥೆಗಳೊಡನೆ ಜೊತೆಗೂಡಿ ಆಯುರ್ವೇದ ಮಹತ್ವ ಸೇರಿದಂತೆ ಆಯುರ್ವೇದದ ಹಲವು ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ, ವಿದ್ಯಾರ್ಥಿಗಳಲ್ಲಿ ಹಾಗೂ ಹೆಚ್ಚಾಗಿ ಮಹಿಳೆಯರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕು ಆಯುರ್ವೇದ ಆಸ್ಪತ್ರೆ ಮತ್ತು 45 ಆಯುರ್ವೇದ ಚಿಕಿತ್ಸಾಲಯಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಲಿದ್ದು, ಸಾರ್ವಜನಿಕರು ಆಯುರ್ವೇದ ಚಿಕಿತ್ಸೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ಇದೇ ವೇಳೆ ಧನ್ವಂತರಿ ಶ್ಲೋಕ ಪಟಿಸಲಾಯಿತು ಹಾಗೂ ಆಯುರ್ವೇದ ಪಿತಾಮಹರಾದ ಧ್ವನಂತರಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಬಳಿಕ ಜಿಲ್ಲೆಯ ಆಯುರ್ವೇದ ಆಸ್ಪತ್ರೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಆಯುಷ್ ಇಲಾಖೆಯ ನಿವೃತ್ತ ವೈದ್ಯಾಧಿಕಾರಿ ಡಾ.ಉಮೇಶ್, ಮಾಜಿ ಸೈನಿಕ ಸುಭಾಷ್ ಚಂದ್ರ ಬೋಸ್, ಕೆಜಿಎಂ ಜಿಲ್ಲಾಧ್ಯಕ್ಷೆ ಡಾ.ಭಾರತಿ ಸಂಗಮ್ ಸೇರಿದಂತೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ