ಸೋಮವಾರ, ಅಕ್ಟೋಬರ್ 7, 2024
ಲಿಡ್ಕರ್: ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಅ.07(ಕರ್ನಾಟಕ ವಾರ್ತೆ):
ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
*ಯೋಜನೆಗಳ ವಿವರ:*
ಚರ್ಮ ಕುಶಲಕರ್ಮಿ ಕುಟುಂಬಗಳ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ಡಿಪ್ಲೋಮಾ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀðಣರಾಗಿರಬೇಕು).
ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಅಥವಾ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ ಹಾಗೂ ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಆಸಕ್ತ ಅರ್ಹ ಅರ್ಜಿದಾರರು ಅ.30ರೊಳಗಾಗಿ ನಿಗಮದ ವೆಬ್‌ಸೈಟ್‌ನ https://suvidha.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸ್ವ-ವಿವರದೊಂದಿಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಲಿಡ್‌ಕರ್‌ನ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-271741, ಅಥವಾ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬಳಿಯ ಬುಡಾ ಸಂಕೀರ್ಣದ ಕಟ್ಟದಲ್ಲಿನ ಲಿಡ್‌ಕರ್‌ನ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ಲಿಡ್‌ಕರ್ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ