ಗುರುವಾರ, ಅಕ್ಟೋಬರ್ 3, 2024

ಪುಸ್ತಕ ಪ್ರದರ್ಶನ

ಬಳ್ಳಾರಿ,ಅ.03(ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ 2021 ನೇ ಸಾಲಿನಲ್ಲಿ ಪ್ರಥಮವಾಗಿ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅ.04 ಮತ್ತು 05 ರಂದು ‘ಗ್ರಂಥಾAಗಣ ನಗರ ಕೇಂದ್ರ ಗ್ರಂಥಾಲಯ ಪಶ್ಚಿಮ ವಲಯ ಹಂಪಿನಗರ ಬೆಂಗಳೂರು’ ಇಲ್ಲಿ ಏರ್ಪಡಿಸಲಾಗಿದೆ. ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಆಯಾ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯದ ಕಚೇರಿಯ ಸೂಚನಾ ಫಲಕ ಹಾಗೂ ಆನ್‌ಲೈನ್ ವೆಬ್‌ಸೈಟ್ ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕ, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಆಕ್ಷೇಪಣೆಗಳಿದ್ದಲ್ಲಿ ಅ.09 ಸಂಜೆ 5.30 ರೊಳಗಾಗಿ “ಆಯುಕ್ತರು ಸಾರ್ವಜನಿಕ ಗ್ರಂಥಾಲಯ ಇಳಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4 ನೇ ಮಹಡಿ,ಡಾ ಅಂಬೇಡ್ಕರ್ ವೀದಿ, ಬೆಂಗಳೂರು -560001 ಇಲ್ಲಿಗೆ ಅಥವಾ ಆಯಾ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ