ಮಂಗಳವಾರ, ಅಕ್ಟೋಬರ್ 22, 2024

ಸಂಡೂರು ವಿಧಾನಸಭೆ ಉಪಚುನಾವಣೆ: ರಜೆ ಮೇಲೆ ತೆರಳುವಂತಿಲ್ಲ

ಬಳ್ಳಾರಿ,ಅ.22(ಕರ್ನಾಟಕ ವಾರ್ತೆ): ಸಂಡೂರು ವಿಧಾನಸಭೆ ಉಪಚುನಾವಣೆ-2024 ನಿಮಿತ್ತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿ, ನೀತಿ ಸಂಹಿತೆ ಜಾರಿಗೊಳಿಸಿದ್ದು, ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ ನಿರ್ಭಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು ಸಕ್ರೀಯವಾಗಿ ಪಾಲ್ಗೊಳ್ಳಬೇಕಿರುವುದರಿಂದ, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ