ಮಂಗಳವಾರ, ಅಕ್ಟೋಬರ್ 15, 2024
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಅ.15(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್ಗಳಿಗೆ (ಒಟ್ಟು 39 ವಾರ್ಡ್) ವಾರ್ಡ್ ಸಮಿತಿ ರಚಿಸುವ ಕುರಿತು ಆಸಕ್ತ ಸಂಘ ಸಂಸ್ಥೆಗಳ ಪ್ರತಿನಿಧಿ ಮತ್ತು ಸಾರ್ವಜನಿಕರಿಂದÀ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 15 ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.
39 ವಾರ್ಡ್ಗಳಿಗೆ ಪೂರ್ಣ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ, ಪುನ: ಅರ್ಜಿ ಆಹ್ವಾನಿಸಲಾಗಿದೆ. ವಾರ್ಡ್ ಸಮಿತಿ ಸದಸ್ಯರನ್ನಾಗಿ ಆಯ್ಕೆಯಾಗಲು ಆಸಕ್ತ ಸಂಘ ಸಂಸ್ಥೆಯ ಪ್ರತಿನಿಧಿ ಮತ್ತು ಸಾರ್ವಜನಿಕರು ಪಾಲಿಕೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-1, 2, 3 ಅಥವಾ ವೆಬ್‌ಸೈಟ್ www.ballaricity.mrc.gov.in ನ್ನು ಸಂಪರ್ಕಿಸಬಹುದು ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ