ಬುಧವಾರ, ಅಕ್ಟೋಬರ್ 16, 2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ,ಅ.16(ಕರ್ನಾಟಕ ವಾರ್ತೆ):
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ,” “ಶುಲ್ಕ ಮರುಪಾವತಿ” ವಿದ್ಯಾಸಿರಿ–ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಈಗಾಗಲೇ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಕೆ.ಜಲಾಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ