ಬುಧವಾರ, ಅಕ್ಟೋಬರ್ 23, 2024

ಪಡಿತರ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ

ಬಳ್ಳಾರಿ,ಅ.23(ಕರ್ನಾಟಕ ವಾರ್ತೆ): ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಸಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಹೆಬ್ಬೆರಳು ನೀಡಿ ಹೆಸರು ಮರು ನೋಂದಾವಣೆ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ