ಗುರುವಾರ, ಅಕ್ಟೋಬರ್ 17, 2024

ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪ ನಮನ

ಬಳ್ಳಾರಿ,ಅ.17(ಕರ್ನಾಟಕ ವಾರ್ತೆ): ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಅಂಗವಾಗಿ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಆವರಣದಲ್ಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಜಿಲ್ಲಾಡಳಿತ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪುಷ್ಪನಮನ ಸಲ್ಲಿಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್.ಕೆ ಶಂಕಿನದಾಸರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ