ಮಂಗಳವಾರ, ಅಕ್ಟೋಬರ್ 1, 2024

ಕುರುಗೋಡು: ಕುಂದುಕೊರತೆ ನಿವಾರಣಾ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳ ನೇಮಕ: ಅರ್ಜಿ ಆಹ್ವಾನ

ಬಳ್ಳಾರಿ,ಅ.01(ಕರ್ನಾಟಕ ವಾರ್ತೆ): ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ) ಅಧಿನಿಯಮ 2014 ರಲ್ಲಿನ 20ನೇ ಪ್ರಕರಣದ 1ನೇ ಉಪ ಪ್ರಕರಣದ ಅಡಿಯಲ್ಲಿ ಹಾಗೂ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ) ಅಧಿನಿಯಮ 2019 ರ ಅಧ್ಯಾಯ 3ರ ಕಲಂ ಸಂಖ್ಯೆ 18ರನ್ವಯ ರಚಿಸಲಾದ ಕುಂದು ಕೊರತೆ ನಿವಾರಣಾ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಅರೆಕಾಲಿಕ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಅ.15 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಧ್ಯಕ್ಷರ ಹುದ್ದೆಗೆ ಮತ್ತು ಸದಸ್ಯರ ಸ್ಥಾನಕ್ಕೆ ಅರ್ಹತೆ ಸಂಭಾವನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆಯ ವೆಬ್‌ಸೈಟ್ www.kurugodutown.mrc.gov.in ಮತ್ತು ಡೇ-ನಲ್ಡ್ ಶಾಖೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ