ಶುಕ್ರವಾರ, ಅಕ್ಟೋಬರ್ 25, 2024
ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಅ.25(ಕರ್ನಾಟಕ ವಾರ್ತೆ):
ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ.
ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಒಟ್ಟು 469 ವಿದ್ಯಾರ್ಥಿಗಳಿದ್ದು, ಎನ್‌ಸಿಆರ್‌ಟಿ ಪಠ್ಯಕ್ರಮ ಹೊಂದಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾರ ಕಚೇರಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾರ ಮೊ:9740738762 ಗೆ ಸಂಪರ್ಕಿಸಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ