ಮಂಗಳವಾರ, ಅಕ್ಟೋಬರ್ 22, 2024

ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ.ಅ.22(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ ಆತ್ಮ ಯೋಜನೆಯಡಿ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕಿನ ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅವರು ತಿಳಿಸಿದ್ದಾರೆ. ಆಸಕ್ತ ಅರ್ಹ ರೈತರು ಹಾಗೂ ರೈತ ಮಹಿಳೆಯರು ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ