ಗುರುವಾರ, ಅಕ್ಟೋಬರ್ 3, 2024
ಅನಾಮಧೇಯ ಮೃತ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಅ.03(ಕರ್ನಾಟಕ ವಾರ್ತೆ):
ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.20 ರಂದು ನಗರದ ದುರುಗಮ್ಮ ದೇವಸ್ಥಾನದ ಮುಂದೆ ಕಾಂಪೌAಡ್ ಹೊರಗಡೆ ಗೇಟ್ ಪಕ್ಕದ ರಸ್ತೆಯ ಪುಟ್‌ಪಾತ್ ಹತ್ತಿರ ಸುಮಾರು 50 ರಿಂದ 60 ವರ್ಷದ ಅನಾಮಧೇಯ ವ್ಯಕ್ತಿಯು ಮೃತಪಟ್ಟಿದ್ದು, ವಾರಸುದರರ ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಆರಕ್ಷಕ ಉಪ ನಿರೀಕ್ಷಕರು ಮನವಿ ಮಾಡಿದ್ದಾರೆ.
ಮೃತನ ಚಹರೆ ಗುರುತು: ಎತ್ತರ 5.4 ಅಡಿ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ ಹೊಂದಿದ್ದು, ಬೋಳು ತಲೆ, ಬಿಳಿ ಮತ್ತು ಕಪ್ಪು ಬಣ್ಣದ ಮೀಸೆ ಹೊಂದಿರುತ್ತಾನೆ.
ಮೃತನ ಮೈಮೇಲೆ ಬಾದಾಮಿ ಬಣ್ಣದ ಅರ್ಧತೋಳಿನ ಟೀ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ.08392-258100, ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿ.ಐ ಮೊ.9480803046 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ