ಶುಕ್ರವಾರ, ಅಕ್ಟೋಬರ್ 18, 2024
ಅನಾಮಧೇಯ ಮೃತ ದೇಹ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ನಗರದ ಮೋತಿ ವೃತ್ತದ ಹತ್ತಿರ ಸುಮಾರು 35-40 ವರ್ಷದ ಅನಾಮಧೇಯ ವ್ಯಕ್ತಿಯ ಮೃತ ದೇಹವು ಅ.16 ರಂದು ಪತ್ತೆಯಾಗಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಮೃತ ದೇಹದ ಚಹರೆ ಗುರುತು: ಅಂದಾಜು ಎತ್ತರ 5.4 ಅಡಿ, ಕೋಲು ಮುಖ, ಎಣ್ಣೆಗೆಂಪು ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸಣ್ಣ ಕಪ್ಪು ಕೂದಲು ಮತ್ತು ವ್ಯಕ್ತಿಯ ಮೃತ ದೇಹದ ಮೇಲೆ ಅರ್ಧ ತೋಳಿನ ಟೀಶರ್ಟ್ ಹಾಗೂ ಕ್ರೀಂ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, 258102, ಬ್ರೂಸ್‌ಪೇಟೆ ಪೊಲೀಸ್ ಠಾಣೆ ದೂ.08392-272022, ಪಿ.ಎಸ್.ಐ ಮೊ.9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ