ಸೋಮವಾರ, ಅಕ್ಟೋಬರ್ 21, 2024
ಕರ್ನಾಟಕ ಸಾಹಿತ್ಯ ಪರಿಷತ್ತು; ಯುವಕವಿ ಗೋಷ್ಠಿಗೆ ಕವಿತೆಗಳ ಆಹ್ವಾನ
ಬಳ್ಳಾರಿ,ಅ.21(ಕರ್ನಾಟಕ ವಾರ್ತೆ):
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸಂಭ್ರಮ-50 ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ಯುವಕವಿಗೋಷ್ಠಿಗಳನ್ನು ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ 20-40 ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕವಿಗಳು ಅ.30ರೊಳಗಾಗಿ ಕನಿಷ್ಠ ಮೂರು ಕವಿತೆಗಳನ್ನು ಕಳುಹಿಸಬಹುದು.
ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಕಾಡಮಿ ಜಾಲತಾಣ ವೆಬ್‌ಸೈಟ್ http://karnatakasahithyaacademy.org ಲಿಂಕ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಅವರು ಪ್ರಕಟಣೆ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ