ಶನಿವಾರ, ಅಕ್ಟೋಬರ್ 19, 2024

ರೈತರು ಮೆಣಸಿನಕಾಯಿ ಬೆಳೆಯಲ್ಲಿ ಹೊಸ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಸಿನಸ್) ಕೀಟ ಕಂಡುಬAದಲ್ಲಿ ಸೂಕ್ತ ಕ್ರಮ ಅನುಸರಿಸಿ

ಬಳ್ಳಾರಿ,ಅ.19(ಕರ್ನಾಟಕ ವಾರ್ತೆ): ಪ್ರಸಕ್ತ ವರ್ಷದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 42,625 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದ್ದು, ಕಳೆದ ವರ್ಷ ಮೆಣಸಿನಕಾಯಿ ಬೆಳೆಯನ್ನು ಬಾಧಿಸಿದ್ದ ಹೊಸ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟವು ಈ ಬಾರಿಯೂ ಕಾಣಿಸುವ ಸಂಭವವಿದ್ದು, ಕೀಟದ ನಿರ್ವಹಣೆಗೆ ರೈತರು ಸೂಕ್ತ ಕ್ರಮ ಅನುಸರಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರೌಢ ಕೀಟಗಳು ಗುಂಪು ಗುಂಪಾಗಿ ಎಲೆಗಳ ಕೆಳಭಾಗದಲ್ಲಿ, ಹೂಗಳ ಒಳಗೆ ಮತ್ತು ಹೊರಗೆ ಕಂಡುಬರುತ್ತವೆ. ಮರಿ ಹಂತದ ನುಸಿಗಳು ಎಲೆಗಳ ಕೆಳಭಾಗದಲ್ಲಿ ಕೇಂದ್ರೀಕೃತಗೊAಡಿರುತ್ತವೆ. ಕೀಟಗಳು ಸಸ್ಯದ ಬಹುಭಾಗಗಳಿಂದ ರಸವನ್ನು ಹೀರುವುದರಿಂದ ಸಸ್ಯದ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಎಲೆಗಳ ಅಂಚುಗಳು ಮೇಲ್ಮುಖವಾಗಿ ಮುದುಡುವುದು, ಹೂಗಳು ಉದುರುವುದು ಮತ್ತು ಬೆಳವಣಿಗೆ ಹಂತದಲ್ಲಿರುವ ಚಿಗುರುಗಳು ಗುಂಪಾಗಿ ಹೂಬಿಡದೆ ಒಣಗುವುದು ಸಾಮಾನ್ಯವಾಗಿ ಕಂಡುಬರುವ ಹಾನಿಯ ಲಕ್ಷಣಗಳಾಗಿವೆ. ಕಾಲ ಕ್ರಮೇಣ, ಕಾಯಿಗಳ ಸಂಖ್ಯೆ ಕಡಿಮೆಯಾಗಿ ಇಳುವರಿಯು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಳ್ಳುತ್ತದೆ. *ನಿರ್ವಹಣಾ ಕ್ರಮಗಳು:* ಹೊಲದ ಸುತ್ತಲೂ 2-3 ಸಾಲು ಜೋಳ, ಮೆಕ್ಕೆಜೋಳ, ಸಜ್ಜೆಯನ್ನು ಬೇಲಿ ಬೆಳೆಯಾಗಿ ಅಡವಾಗಿ ಬಿತ್ತುವುದರಿಂದ ಕೀಟಗಳ ಪ್ರಸಾರವನ್ನು ನಿಯಂತ್ರಿಸಬಹುದು. ಹೊಲ ಮತ್ತು ಬದುಗಳ ಸ್ವಚ್ಛತೆಯಿಂದ ಥ್ರಿಪ್ಸ್ ನುಸಿಗಳಿಗೆ ಆಸರೆ ನೀಡುವ ಕಳೆಗಳ ನಿರ್ಮೂಲನೆ ಮಾಡಬಹುದು. ಸೂಕ್ತ ಅಂತರ (90*30 ಸೆಂ.ಮೀ ಮತ್ತು 60*45 ಸೆಂ.ಮೀ) ಕಾಪಾಡಬೇಕು. ಚೆನ್ನಾಗಿ ಕೊಳೆತ ಕೊಟ್ಟಿಗೆ ಗೊಬ್ಬರದೊಡನೆ ಮೆಟಾರೈಜಿಯಮ್ ಅನಿಸೋಪ್ಲಿಯೆ ಎಂಬ ಶಿಲೀಂದ್ರ ಕೀಟನಾಶಕದಿಂದ (2-3 ಕೆ.ಜಿ/ಟನ್) ಮೌಲ್ಯವರ್ಧನೆಗೊಳಿಸಿ ಹೊಲಗಳಿಗೆ ಹಾಕಬೇಕು. ಬೇವಿನ ಹಿಂಡಿ (200 ಕೆ.ಜಿ/ಎಕರೆಗೆ) ಮತ್ತು ಎರೆಹುಳು ಗೊಬ್ಬರವನ್ನು (500 ಕೆ.ಜಿ/ಎಕರೆಗೆ) ಮಣ್ಣಿನಲ್ಲಿ ಬೆರೆಸುವುದರಿಂದ ನಿರೋಧಕ ಶಕ್ತಿ ವೃದ್ಧಿಗೊಳ್ಳುತ್ತದೆ. ಶಿಫಾರಸ್ಸು ಪ್ರಮಾಣದ ರಸಗೊಬ್ಬರದದೊಂದಿಗೆ ಪೊಟ್ಯಾಶ್‌ನ ಬಳಕೆ ವೃದ್ಧಿಸುವುದರಿಂದ ಕೀಟ ನಿರೋಧಕ ಶಕ್ತಿ ಹೆಚ್ಚುತ್ತದೆ. ನೀಲಿ ಅಂಟಿನ ಬಲೆಗಳನ್ನು @25-30/ಎಕರೆಗೆ ಬೆಳೆಯ ಎತ್ತರಕ್ಕೆ ಅಳವಡಿಸಬೇಕು. ಆಗಿಂದಾಗೆ ಕುಂಟೆಯೊಡೆಯುವುದರಿAದ ಕೋಶಾವಸ್ಥೆಯಲ್ಲಿರುವ ಥ್ರಿಪ್ಸ್ ನುಸಿಯನ್ನು ನಾಶಪಡಿಸಬಹುದು. ಸಾಧ್ಯವಾದಲ್ಲಿ ಕಾಲುವೆ ಮೂಲಕ ನೀರುಣಿಸುವ ಬದಲು ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಬೇಕು. ಸಿಲ್ವರ್ ಬಣ್ಣದ ಪ್ಲಾಸ್ಟಿಕ್ ಶೀಟ್ (25-30 ಮೈಕ್ರಾನ್)ನಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ಕೋಶಾವಸ್ಥೆಗೆ ಹೋಗುವುದನ್ನು ತಡೆಯಬಹುದು. ತೀವ್ರ ಬಾಧೆಗೊಳಗಾದ ಗಿಡಗಳನ್ನು ಕಿತ್ತುಗುಂಡಿಯಲ್ಲಿ ಮುಚ್ಚಬೇಕು ಅಥವಾ ಸುಡಬೇಕು. ಪರಭಕ್ಷಕ/ಮಿತ್ರ ಕೀಟಗಳ ವೃದ್ಧಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಕೀಟನಾಶಕಗಳ ಬದಲು ಪರಿಸರ ಸ್ನೇಹಿ ಕೀಟನಾಶಕಗಳಾದ ಶೇ.5 ರ ಬೇವಿನ ಬೀಜದ ಕಷಾಯ, ಬೇವಿನ ಎಣ್ಣೆ (1500 ಪಿ.ಪಿ.ಯಂ) @ 2 ಮಿ.ಲೀ/ಲೀ, ಹೊಂಗೆ ಎಣ್ಣೆ @3 ಮಿ.ಲೀ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು. ಶಿಲೀAಧ್ರ ಕೀಟನಾಶಕಗಳಾದ ಬಿವೇರಿಯಾ ಬಸ್ಸಿಯಾನ ಅಥವಾ ಲೆಕ್ಯಾನಿಸಿಲಿಯಂ ಲೆಕ್ಯಾನಿ ಅಥವಾ ಮೆಟಾರೈಜಿಯಮ್ ಅನಿಸೋಪ್ಲಿಯೇಯನ್ನು @4 ಗ್ರಾಂ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು. ಅವಶ್ಯಕತೆಗನುಸಾರವಾಗಿ ಶಿಫಾರಸ್ಸು ಮಾಡಿರುವ ರಾಸಾಯನಿಕ ಕೀಟನಾಶಕಗಳಾದ 0.3 ಮಿ.ಲೀ., ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅಥವಾ 0.2 ಗ್ರಾಂ ಥಯೋಮೆಥಾಕ್ಸಾಮ್ 25 ಡಬ್ಲ್ಯೂ.ಜಿ ಅಥವಾ 1.0 ಮಿ.ಲೀ., ಫಿಪ್ರೋನಿಲ್ 5 ಎಸ್.ಸಿ ಅಥವಾ 1.0 ಗ್ರಾಂ ಡಯಾಫೆನ್ ಥಯೂರಾನ್ 50 ಡಬ್ಲ್ಯೂ.ಪಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ