ಸೋಮವಾರ, ಅಕ್ಟೋಬರ್ 7, 2024

ವ್ಯಕ್ತಿ ಕಾಣೆ

ಬಳ್ಳಾರಿ,ಅ.07(ಕರ್ನಾಟಕ ವಾರ್ತೆ): ನಗರದ ರಾಣಿತೋಟ ಏರಿಯಾದ ನಿವಾಸಿಯಾದ ಚಂದ್ರಶೇಖರ್ ಎನ್ನುವ 40 ವರ್ಷದ ವ್ಯಕ್ತಿಯು ಅ.04 ರಂದು ಮನೆಯಿಂದ ಹೋದವನು ಮರಳಿ ಬಾರದೇ ಕಾಣೆಯಾಗಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಎತ್ತರ 5.6 ಅಡಿ, ತೆಳುವಾದ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಸಿಮೆಂಟ್ ಕಲರ್ ಅಂಗಿ, ಕ್ರೀಮ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪಿಐ ಮೊ.8392272022 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ