ಗುರುವಾರ, ಅಕ್ಟೋಬರ್ 3, 2024

ಮಹಿಳೆ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಅ.03(ಕರ್ನಾಟಕ ವಾರ್ತೆ): ಇಲ್ಲಿನ ಗಾಂಧಿನಗರ ನಿವಾಸಿಯಾದ ಎಂ.ಕೆ.ಸರೋಜಾ ಎನ್ನುವ 56 ವರ್ಷದ ಮಹಿಳೆಯು ಸೆ.24 ಕಾಣೆಯಾಗಿರುವ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಮಹಿಳೆಯ ಚಹರೆ ಗುರುತು: ಎತ್ತರ 5.3 ಅಡಿ, ದುಂಡುಮುಖ, ದೃಢವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು ಕಾಣೆಯಾದ ಸಂದರ್ಭದಲ್ಲಿ ಚೂಡಿದಾರ ಧರಿಸಿರುತ್ತಾಳೆ. ಮಹಿಳೆಯು ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿ.ಎಸ್.ಐ ಮೊ.9480803082, ಪಿ.ಐ. ಮೊ9480803046 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ