ಗುರುವಾರ, ಅಕ್ಟೋಬರ್ 17, 2024

ಕಂಪ್ಲಿ: ಅಂಜುಮನ್ ಎ ಖಿದ್ಮತೆ ಇಸ್ಲಾಂ ಸಮಿತಿ ಸಾಮಾನ್ಯ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಅ.17(ಕರ್ನಾಟಕ ವಾರ್ತೆ): ಕಂಪ್ಲಿ ಪಟ್ಟಣದ ವಕ್ಫ್ ಸಂಸ್ಥೆ ಅಂಜುಮನ್ ಎ ಖಿದ್ಮತೆ ಇಸ್ಲಾಂ ಸಮಿತಿಯ ಸಾಮಾನ್ಯ ಸದಸ್ಯರ ದಾಖಾಲಾತಿ ನೋಂದಣಿಯು ಅ.21 ರಿಂದ ನ. 12 ರವರೆಗೆ ನಡೆಯಲಿದೆ ಎಂದು ಸಮಿತಿಯ ನೋಂದಣಿ ಅಧಿಕಾರಿ ತಿಳಿಸಿದ್ದಾರೆ. ಅ.18 ರಂದು ಅಧಿಸೂಚನೆ ಪ್ರಕಟಿಸಲಾಗುತ್ತಿದ್ದು, ಅಕ್ಟೋಬರ್ 21 ರಿಂದ ನವೆಂಬರ್ 12 ರವರೆಗೆ ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಸದಸ್ಯರ ದಾಖಲಾತಿಗಾಗಿ ಅರ್ಜಿ ನಮೂನೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಭರ್ತಿ ಮಾಡಿದ ಅರ್ಜಿ ನಮೂನೆಗಳೊಂದಿಗೆ 03 ಇತ್ತೀಚಿನ ಭಾವಚಿತ್ರ ಹಾಗೂ ರೂ.620 ಶುಲ್ಕ ಹಾಗೂ ಅಧಿಕೃತ ವಿಳಾಸದ 02 ಗುರುತಿನ ಚೀಟಿಗಳೊಂದಿಗೆ ನವೆಂಬರ್ 12 ರೊಳಗೆ ಮುಸ್ಲಿಂ ಖಬರಸ್ತಾನ್(ಸುನ್ನಿ), ಕಂಪ್ಲಿಯಲ್ಲಿ ಸ್ಥಾಪಿಸಲಾಗಿರುವ ನೋಂದಣಿ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ದಾಖಲಾದ ಸದಸ್ಯರ ಕರಡು ಪಟ್ಟಿಯನ್ನು ನವೆಂಬರ್ 26 ರಂದು ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆಗಳು ಹಾಗೂ ಸಲಹೆ-ಸೂಚನೆಗಳಿದ್ದಲ್ಲಿ ನವೆಂಬರ್ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯೊಳಗೆ ಸಲ್ಲಿಸಬಹುದು. ಆಕ್ಷೇಪಣೆಗಳ ವಿಚಾರಣೆ ನವೆಂಬರ್ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಸಲಾಗುತ್ತದೆ. ದಾಖಲಾದ ಸಾಮಾನ್ಯ ಸದಸ್ಯರ ಅಂತಿಮ ಪಟ್ಟಿಯನ್ನು ಡಿಸೆಂಬರ್ 5 ರಂದು ಮಧ್ಯಾಹ್ನ 03 ಗಂಟೆಗೆ ಕಂಪ್ಲಿಯ ಮುಸ್ಲಿಂ ಖಬರಸ್ತಾನ್(ಸುನ್ನಿ)ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ