ಶುಕ್ರವಾರ, ಅಕ್ಟೋಬರ್ 4, 2024

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ

ಬಳ್ಳಾರಿ,ಅ.04(ಕರ್ನಾಟಕ ವಾರ್ತೆ): ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ. ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಆರ್.ವಸಂತ್‌ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಸಂಗಮೇಶ್, ಮಹಮ್ಮದ್ ರಫಿ ನೇತೃತ್ವದಲ್ಲಿ ಕಂಪ್ಲಿ, ಸಿರುಗುಪ್ಪ ಮತ್ತು ಬಳ್ಳಾರಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ. *ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:* ಅ.09 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಬಳ್ಳಾರಿ ತಹಶೀಲ್ದಾರರ ಕಚೇರಿಯ ಸಭಾಂಗಣ, ಅ.15 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಸಿರುಗುಪ್ಪದ ಸಿಡಿಪಿಓ ಕಚೇರಿ ಸಭಾಂಗಣ ಮತ್ತು ಅ.19 ರಂದು ಬೆಳಿಗ್ಗೆ 11.30 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ದೂರುಗಳಿದ್ದಲ್ಲಿ ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ