ಮಂಗಳವಾರ, ಅಕ್ಟೋಬರ್ 15, 2024
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಅ.15(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಸುಬ್ರಾಯನಹಳ್ಳಿ ಗ್ರಾಮದ ನಿವಾಸಿ ಹಾಗೂ ಸ್ಮಯೋರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ.ಲಕ್ಷö್ಮಣ ಎನ್ನುವ 23 ವರ್ಷದ ಯುವಕ ಸೆ.13 ರಂದು ಕಾಣೆಯಾಗಿರುವ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣೆಯ ಠಾಣಾಧಿಕಾರಿ ಅವರು ಮನವಿ ಮಾಡಿದ್ದಾರೆ.
*ಕಾಣೆಯಾದ ಯುವಕನ ಚಹರೆ:*
ಎತ್ತರ 5 ಅಡಿ 2 ಇಂಚು, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 4 ಇಂಚು ಕಪ್ಪು ಕೂದಲು, ಬಲಗೈ ಹತ್ತಿರ ಹಚ್ಚೆಯ ಗುರುತು ಇರುತ್ತದೆ. ಯುವಕ ಕಾಣೆಯಾದ ಸಂದರ್ಭದಲ್ಲಿ ಬ್ಲಾಕ್ ಕಲರ್ ತುಂಬು ತೋಳಿನ ಟೀ-ಶರ್ಟ್, ಸಿಮೆಂಟ್ ಕಲರಿನ ಪ್ಯಾಂಟ್ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಸಂಡೂರು ಪೊಲೀಸ್ ಠಾಣೆಯ ಹಿರಿಯ ಪೇದೆ ಮೊ:900815455 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ