ಮಂಗಳವಾರ, ಅಕ್ಟೋಬರ್ 15, 2024

ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಅ.15(ಕರ್ನಾಟಕ ವಾರ್ತೆ): ಜಿಲ್ಲಾ ಮಕಳ ರಕ್ಷಣ ಘಟಕ ವತಿಯಿಂದ ಪೋಕ್ಸೋ ಕಾಯ್ದೆಯಡಿ ಸಂತ್ರಸ್ಥರ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಅವರು ತಿಳಿಸಿದ್ದಾರೆ. ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬಹುದು. ಆಸಕ್ತರು ಅ.26 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅಸಕ್ತ ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡಲು ಕನಿಷ್ಠ 03 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಪ್ರತಿ ಪ್ರಕರಣಕ್ಕೆ ಮೂರು ಸಾವಿರ ರೂ. ಮಾತ್ರ ಸಂಭಾವನೆ ನಿಗದಿಗೊಳಿಸಲಾಗಿದ್ದು, ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪ್ರಮಾಣ ಪತ್ರಗಳೊಂದಿಗೆ ನಗರದ ಕಂಟೋನ್ಮೆAಟ್ ಬಳಿಯ ಶಾಂತಿಧಾಮ ಆವರಣದಲ್ಲಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ನೀಡಬೇಕು ಹೆಚ್ಚಿನ ಮಾಹಿತಿಗಾಗಿ ದೂ.08392-241373 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ